ಉಗುರಿನಲ್ಲಿದ್ದ ರಕ್ತದ ಕಲೆಯಿಂದಾಗಿ ಕೊಲೆ ಮಾಡಿದ್ದ ವ್ಯಕ್ತಿ ಸಿಕ್ಕಿಬಿದ್ದ!

ಮುಂಬೈ: ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದ ಘಟನೆ ಮುಂಬೈನಲ್ಲಿ ನಡೆದಿದ್ದು, ಆತನ ಉಗುರುಗಳ ಮೇಲೆ ಇದ್ದ ರಕ್ತದ ಕಲೆಯಿಂದ ಸಿಕ್ಕಿಬಿದ್ದಿದ್ದಾನೆ.

ಮುಂಬೈನ ಸಕಿನಾಕಾ ಪ್ರದೇಶದಲ್ಲಿ ರೀಮಾ ಭೋಲಾ ಯಾದವ್ ಹತ್ಯೆಯಾದ ದುರ್ದೈವಿ ಹಾಗೂ ಮನೋಜ್ ಪ್ರಜಾಪತಿ (22) ಆರೋಪಿ. ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ರೀಮಾ ಭೋಲಾ ಹಾಗೂ ಮನೋಜ್ ಪ್ರಜಾಪತಿ ಕಳೆದ ಎರಡು ದಿನಗಳಿಂದ ಪ್ರತ್ಯೆಕ ಮನೆಯಲ್ಲಿ ವಾಸಿಸುತ್ತಿದ್ದರು. ರೀಮಾ ಭೋಲಾ ಮನೆಗೆ ಸ್ನೇಹಿತರೊಬ್ಬರು ಬಂದಾಗ ಆಕೆ ಶವವಾಗಿ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ರೀಮಾ ಭೋಲಾ ಅವರ ಸ್ನೇಹಿತೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

crime

ಸ್ಥಳಕ್ಕಾಗಮಿಸಿದ ಪೊಲೀಸರಿಗೆ ರೀಮಾ ಯಾದವ್ ಅವರ ಶವವು ಕತ್ತು ಸೀಳಿದ ರೀತಿಯಲ್ಲಿ ಕಂಡು ಬಂದಿತ್ತು. ಅದೇ ಸಂದರ್ಭದಲ್ಲಿ ಆಮಿಸಿದ್ದ ಪ್ರಜಾಪತಿಯ ಉಗುರಿನಲ್ಲಿದ್ದ ರಕ್ತದ ಕಲೆಯನ್ನು ನೋಡಿ ಪೊಲೀಸರು ಅನುಮಾನಗೊಂಡಿದ್ದರು. ಇದರಿಂದ ಪ್ರಜಾಪತಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಇದನ್ನೂ ಓದಿ: ಕುತುಬ್ ಮಿನಾರ್‌ಗೆ ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಲು ಆಗ್ರಹಿಸಿ ಪ್ರತಿಭಟನೆ

POLICE JEEP

ಮೊದಲಿಗೆ ಪ್ರಜಾಪತಿಯು ಪೊಲೀಸರ ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ಪೊಲೀಸರ ನಿರಂತರ ವಿಚಾರಣೆಯಿಂದಾಗಿ ಪ್ರಜಾಪತಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಂಡು ಆರೋಪಿ ಪ್ರಜಾಪತಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ – ಇಂದು ಹೈಕಮಾಂಡ್‍ನಿಂದ ಬಿಗ್ ಸಂದೇಶ ನಿರೀಕ್ಷೆ

Comments

Leave a Reply

Your email address will not be published. Required fields are marked *