ನಿಧಿಗಳ್ಳರಿಂದ ಐತಿಹಾಸಿಕ ಬೀರೇಶ್ವರ ದೇವರ ವಿಗ್ರಹ ಕಳ್ಳತನ

ಚಿಕ್ಕೋಡಿ: ದೇವಸ್ಥಾನದ ಕಲ್ಲಿನ ದೇವರ ಮೂರ್ತಿಯನ್ನೇ ಕಳ್ಳರು ಕದ್ದೋಯ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಕೊಕಟನೂರ ಗ್ರಾಮದ ಐತಿಹಾಸಿಕ ದೇವಸ್ಥಾನವಾಗಿದ್ದ ಬಿರೇಶ್ವರ ದೇವಸ್ಥಾನದ ಕಲ್ಲಿನ ವಿಗ್ರಹವನ್ನು ಎತ್ತಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷ – ಬೆಚ್ಚಿಬಿದ್ದ ವಾಹನ ಸವಾರರು 

ದೇವರ ಮೂರ್ತಿಯನ್ನು ನಿಧಿಗಳ್ಳರು ಅಥವಾ ವಾಮಾಚಾರ ಮಾಡುವ ಖದೀಮರು ಕದ್ದಿರಬಹದು ಎನ್ನುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಳಗಿನ ಜಾವ ಪೂಜೆಗಾಗಿ ಅರ್ಚಕರು ಬಂದ ಮೇಲೆ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *