ಜೆಡಿಎಸ್ ಮುಖಂಡನ ಭೀಕರ ಹತ್ಯೆ – ಹಾಸನದಲ್ಲಿ ಪೊಲೀಸ್ ಸರ್ಪಗಾವಲು

JDS LEADER

ಹಾಸನ: ಜೆಡಿಎಸ್ ಮುಖಂಡ, ಹಾಸನ ನಗರಸಭೆ ಸದಸ್ಯರೊಬ್ಬರನ್ನ ಹಾಸನ ನಗರದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರಸಭೆ ಸದಸ್ಯರ ಹತ್ಯೆಯಿಂದ ಹಾಸನದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಜೆಡಿಎಸ್ ಮುಖಂಡ, ಹಾಸನ ನಗರಸಭೆ 16ನೇ ವಾರ್ಡ್ ಸದಸ್ಯ ಪ್ರಶಾಂತ್ ನಾಗರಾಜ್(41) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಾಸನ ನಗರದ ಜವೇನಹಳ್ಳಿ ಮಠದ ರಸ್ತೆಯ, ಲಕ್ಷ್ಮೀಪುರ ಬಡಾವಣೆಯಲ್ಲಿ ಒಬ್ಬರೇ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಿಂಬಾಲಿಸಿದ ಹಂತಕರು ಅಟ್ಟಾಡಿಸಿ ಬರ್ಬರವಾಗಿ ಕೊಂದು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ NSUI ದಾಳಿ

ನಗರಸಭೆ 16ನೇ ವಾರ್ಡ್‌ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿ ಸುಮಾರು 1,700 ಮತಗಳ ಅಂತರದಿಂದ ಗೆದಿದ್ದ ಪ್ರಶಾಂತ್, ಸಂಜೆ ಕೆಲಸ ಮುಗಿಸಿ ಮನೆ ತಲುಪಲು ಕೇವಲ ಅರ್ಧ ಕಿಮೀ ಇದ್ದಾಗಲೇ ದಿಢೀರ್ ಅಟ್ಯಾಕ್ ಮಾಡಿ ದುರುಳರು ಜೀವ ತೆಗೆದಿದ್ದಾರೆ. ತಲೆ ಮತ್ತು ಕೈ ಭಾಗಕ್ಕೆ ಬಲವಾಗಿ ಹೊಡೆದು ಗುರುತು ಸಿಗದಂತೆ ಕೊಚ್ಚಿದ್ದು, ಪ್ರಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ

ಪ್ರಶಾಂತ್ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆಯೇ ಹಿಮ್ಸ್ ಆಸ್ಪತ್ರೆ ಆವರಣಕ್ಕೆ ದೌಡಾಯಿಸಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಯಾವುದೇ ಕಾರಣಕ್ಕೂ ಮೃತದೇಹವನ್ನು ಆಂಬುಲೆನ್ಸ್‌ನಿಂದ ಕೆಳಗಿಳಿಸಕೂಡದು. ನಗರದಲ್ಲಿ ರೌಡಿಸಂಗೆ ಪೊಲೀಸ್ ಇಲಾಖೆ ಬೆಂಬಲವಾಗಿ ನಿಂತಿದೆ. ಇದರಿಂದಲೇ ಗೂಂಡಾಗಿರಿ ಹೆಚ್ಚಿ, ಚುನಾಯಿತ ಪ್ರತಿನಿಧಿಯ ಕೊಲೆ ನಡೆದಿದೆ ಎಂದು ಗುಡುಗಿದರು. ಕರ್ತವ್ಯಲೋಪ ಆರೋಪದಡಿ ಯಾರದೋ ಗುಲಾಮರಾಗಿ ಕೆಲಸ ಮಾಡುತ್ತಿರುವ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಕೂಡಲೇ ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

CRIME 2

ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಎಸ್‌ಪಿ ಆರ್.ಶ್ರೀನಿವಾಸ್‌ಗೌಡ, ಹೆಚ್ಚುವರಿ ಎಸ್‌ಪಿ ಡಾ.ಬಿ.ಎನ್.ನಂದಿನಿ, ಪೆನ್‌ಶೆನ್ ಮೊಹಲ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ತಡೆಯಬೇಕಾದ್ರೆ ಸೆಕ್ಸ್ ಮಾಡೋದು ನಿಲ್ಲಿಸಿ, ಇಲ್ಲವೇ 8 ವಾರ ಕಾಂಡೋಮ್ ಬಳಸಿ – UK

ಜೆಡಿಎಸ್ ಮುಖಂಡನ ಹತ್ಯೆಯಿಂದಾಗಿ ಹಾಸನದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾಣವಾಗಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ಥ್ ಹಾಕಲಾಗಿದೆ. ಆದಷ್ಟು ಬೇಗ ಪೊಲೀಸರು ಕೊಲೆಗಡುಕರನ್ನು ಪತ್ತೆಹಚ್ಚಿ, ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Comments

Leave a Reply

Your email address will not be published. Required fields are marked *