ಅಮೆರಿಕದಲ್ಲಿ 2 ಪ್ರತ್ಯೇಕ ಸ್ಥಳಗಳಲ್ಲಿ ಗುಂಡಿನ ದಾಳಿ- ಮೂವರು ಸಾವು

ವಾಷಿಂಗ್ಟನ್: ಮತ್ತೆ ಅಮೆರಿಕದ 2 ಪ್ರತ್ಯೇಕ ಸ್ಥಳಗಳಲ್ಲಿ ಗುಂಡಿನ ಸದ್ದು ಕೇಳಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿರೆ, ಇಬ್ಬರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಟೆಕ್ಸಾಸ್‍ನಲ್ಲಿ ನಡೆದ ಗುಂಡಿನ ದಾಳಿ ಎಲ್ಲರನ್ನು ಬೆಚ್ಚಿ ಬಿಳಿಸಿತ್ತು. ಇದಾದ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗನ್ ಹಿಂಸಾಚಾರದ ಕುರಿತು ಭಾಷಣ ಮಾಡಿದ ಸ್ವಲ್ಪ ಸಮಯದ ನಂತರ ಈ ಗುಂಡಿನ ದಾಳಿ ನಡೆದಿದೆ.

ಅಯೋವಾ ರಾಜ್ಯದ ಚರ್ಚ್ ಪಾರ್ಕಿಂಗ್ ಸ್ಥಳದಲ್ಲಿ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರನ್ನು ಗುಂಡು ಹಾರಿಸಿ ಹತ್ಯೆಗೈದ ನಂತರ ತನು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದನ್ನೂ ಓದಿ: ಖಾಸಗಿ ಬಸ್, ಕಂಟೈನರ್ ಮುಖಾಮುಖಿ- 6ಕ್ಕೂ ಹೆಚ್ಚು ಮಂದಿ ಸಜೀವ ದಹನ

ಇದರ ಬೆನ್ನಲ್ಲೆ ಮತ್ತೊಂದು ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದ್ದು, ವಿಸ್ಕಾನ್ಸಿನ್‍ನ ರೇಸಿನ್‍ನಲ್ಲಿರುವ ಸ್ಮಶಾನದಲ್ಲಿ ಸಮಾಧಿಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅಂತ್ಯಕ್ರಿಯೆಗೆಂದು ಬಂದ ಸಂದರ್ಭದಲ್ಲಿ ಅನೇಕರ ಮೇಲೆ ಗುಂಡು ಹಾರಿಸಲಾಗಿದೆ. ಇದರಿಂದಾಗಿ ಅನೇಕರು ದಿಕ್ಕಾಪಾಲಾಗಿ ಓಡಿದ್ದಾರೆ. ಈ ಸಮಯದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ತಿಂಗಳ ಅಂತ್ಯದಲ್ಲಿ ಸೌದಿಗೆ ಭೇಟಿ ನೀಡಲಿದ್ದಾರೆ ಬೈಡನ್

Comments

Leave a Reply

Your email address will not be published. Required fields are marked *