ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ: ಒಮರ್ ಅಬ್ದುಲ್ಲಾ

Omar Abdullah

ಶ್ರೀನಗರ: ನೂಪುರ್ ಶರ್ಮಾ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಂಡಿರುವುದು ಮುಸ್ಲಿಮರ ಭಾವನೆಗೆ ಧಕ್ಕೆಯುಂಟಾಗಿದೆ ಎಂದಲ್ಲ. ವಿದೇಶಿಯರನ್ನು ಓಲೈಸುವುದಕ್ಕಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿರುವುದು ವಿವಾದ ಸೃಷ್ಟಿಸಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಅದೇ ವಿಚಾರವಾಗಿ ಕೋಮು ಗಲಭೆ ಉಂಟಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಕಟಣೆ ಹೊರಡಿಸಿರುವ ಬಿಜೆಪಿ `ಯಾವುದೇ ವರ್ಗ ಅಥವಾ ಧರ್ಮವನ್ನು ಅವಹೇಳನ ಮಾಡುವ ಅಥವಾ ಕೀಳಾಗಿ ಕಾಣುವ ಯಾವುದೇ ಸಿದ್ಧಾಂತಗಳಿಗೆ ಬಿಜೆಪಿಯ ಕಠಿಣ ವಿರೋಧವಿದೆ’ ಎಂದು ಹೇಳಿದೆ. ಇದನ್ನೂ ಓದಿ: ಗಗನಸಖಿಯ ಸಮಾಜಮುಖಿ ಕಾಯಕ – ಗಗನದಿಂದ ಬೀಜದುಂಡೆ ಬಿತ್ತನೆ

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಯಾವುದೇ ಧಾರ್ಮಿಕ ವ್ಯಕ್ತಿಗಳಿಗೆ ಅವಮಾನಿಸುವುದರ ವಿರುದ್ಧ ಬಿಜೆಪಿ ದಿಢೀರನೆ ಎಚ್ಚೆತ್ತು ಬಹಿರಂಗವಾಗಿ ಖಂಡಿಸಿರುವುದರ ಹಿಂದೆ ವಿದೇಶಿಯರನ್ನು ಓಲೈಸುವ ಗುರಿಯಿದೆ. ಬಿಜೆಪಿಯ ಈ ದಿಢೀರ್ ಎಚ್ಚರವು ಭಾರತದಲ್ಲಿನ ಲಕ್ಷಾಂತರ ಮುಸ್ಲಿಮರ ಭಾವನೆಗಳಿಗೆ ಧಕ್ಕೆಯುಂಟಾಗಿರುವುದರ ಕುರಿತಾಗಿ ತೆಗೆದುಕೊಂಡಿರುವ ಕ್ರಮ ಅಲ್ಲ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯು ಯಾವುದೇ ಧರ್ಮ ಹಾಗೂ ಧಾರ್ಮಿಕ ವ್ಯಕ್ತಿಗಳಿಗೆ ಅವಮಾನ ಮಾಡುವುದನ್ನು ಖಂಡಿಸಿದೆ. ಆದರೆ ಭಾರತದ ಲಕ್ಷಾಂತರ ಮುಸ್ಲಿಮರ ಭಾವನೆಗಳನ್ನು ನೋಯಿಸಿರುವುದಕ್ಕೂ ಇದಕ್ಕೂ ಸಂಬಂಧವಿಲ್ಲ. ಕ್ಷಮೆಯಾಚಿಸುವ ರೀತಿಯ ಈ ಪ್ರಕಟಣೆಯು ವಿದೇಶಿಗರನ್ನು ಗುರಿಯಾಗಿಸಿ ಮಾಡಿರುವುದೇ ಆಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪ್ರಕಟಣೆ ಹೊರಡಿಸಿದ ಕೆಲ ಸಮಯದಲ್ಲೇ ಬಿಜೆಪಿಯು ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ದೆಹಲಿ ಘಟಕದ ಮಾಧ್ಯಮ ವಿಭಾಗದ ನೇತೃತ್ವ ವಹಿಸಿದ್ದ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

Comments

Leave a Reply

Your email address will not be published. Required fields are marked *