ಉಪೇಂದ್ರ- ಸುದೀಪ್ ಕಾಂಬಿನೇಷನ್ ‘ಕಬ್ಜ’ ಚಿತ್ರಕ್ಕೆ ಏಳು ಭಾಷೆಗಳಲ್ಲಿ ಡಬ್ಬಿಂಗ್

ಆರ್.ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಸಿನಿಮಾದ ಬಹುತೇಕ ಶೂಟಿಂಗ್ ಮುಗಿಸಿರುವ ನಿರ್ದೇಶಕರು ನಿನ್ನೆಯಿಂದ ಡಬ್ಬಿಂಗ್ ಕಾರ್ಯ ಶುರು ಮಾಡಿದ್ದಾರೆ. ಒಟ್ಟು ಏಳು ಭಾಷೆಗಳಲ್ಲಿ ಈ ಸಿನಿಮಾ ಡಬ್ ಆಗಲಿದೆ.

ಈ ಕುರಿತು ಮಾತನಾಡಿರುವ ನಿರ್ದೇಶಕರು, ‘ನಾವು ಅಂದುಕೊಂಡಂತೆ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಒಂದು ಹಾಡಿನ ಚಿತ್ರೀಕರಣ ಬಿಟ್ಟು, ಉಳಿದ ಚಿತ್ರೀಕರಣ  ಮುಕ್ತಾಯವಾಗಿದೆ.  ಏಕಕಾಲದಲ್ಲಿ ಏಳುಭಾಷೆಗಳಲ್ಲೂ ಡಬ್ಬಿಂಗ್ ಸಹ ಸದ್ದಿಲ್ಲದೆ ನಡೆಯುತ್ತಿದೆ. ಪಕ್ಕಾ ಪ್ಲ್ಯಾನ್ ಮಾಡಿಕೊಂಡು ಸಿನಿಮಾ ರಿಲೀಸ್ ಮಾಡಲಾಗುವುದು’ ಎಂದಿದ್ದಾರೆ.

1940ರ ಕಾಲಘಟ್ಟದ ಕಥೆ ಅದ್ಭುತವಾಗಿದೆ. ಮೋಷನ್ ಪೋಸ್ಟರ್ ಹಾಗೂ ಸ್ಟಿಲ್ಸ್ ಜನಮನಸೂರೆಗೊಂಡಿದೆ. ಮೇಕಿಂಗ್ ತುಣುಕು ನೋಡಿದವರಂತು ಫಿದಾ ಆಗಿದ್ದಾರೆ. ಭಾರತ ದೇಶವೇ ತಿರುಗಿ ನೋಡುವ ಸಿನಿಮಾ ಇದಾಗಲಿದೆ ಎನ್ನುತ್ತಾರೆ ಚಂದ್ರು. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

ಕಬ್ಬ  ಚಿತ್ರ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲಾಗಲಿ ಎಂಬುದೇ ಕನ್ನಡಿಗರ ಆಶಯ. ಚಿತ್ರದ. ಟೀಸರ್ ನೋಡುವ ಕಾತುರದಲ್ಲಿದ್ದೇವೆ. ಆದಷ್ಟು ಬೇಗ ಬಿಡುಗಡೆ ಮಾಡಿ ಎಂದು ಸಿನಿಪ್ರೇಕ್ಷಕರು ಚಂದ್ರು ಅವರನ್ನು ಒತ್ತಾಯಿಸುತ್ತಿದ್ದಾರಂತೆ ಅಭಿಮಾನಿಗಳು.

Comments

Leave a Reply

Your email address will not be published. Required fields are marked *