ಕೋವಿಡ್‌-19 ಹೊಸ ಮಾರ್ಗಸೂಚಿ ಪ್ರಕಟ – ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.

ಹೊಸ ಮಾರ್ಗಸೂಚಿ:
ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇದನ್ನು ಜಾರಿಗೊಳಿಸಲು ಮಾರ್ಷಲ್ ಮತ್ತು ಪೊಲೀಸರು ಸಹಾಯ ಪಡೆಯುವುದು. ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಥಿಯೇಟರ್, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿ ಕಾರ್ಖಾನೆ ಎಲ್ಲಾ ಕಡೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕು. ಮಾಸ್ಕ್ ಹಾಕಿಕೊಂಡು ಬರದಿದ್ದರೆ ಪ್ರವೇಶ ನಿಷೇಧ. ಆಯಾಯ ಸಂಸ್ಥೆಯ ಆಡಳಿತ ಸಂಸ್ಥೆ ಮತ್ತು ಮಾಲೀಕರು ಜವಾಬ್ದಾರಿ ತೆಗೆದುಕೊಳ್ಳಬೇಕು. ಇದನ್ನೂ ಓದಿ: ಹೆಣ್ಣು ಮಗುವಿಗೆ ತಾಯಿಯಾದ ಪ್ರಣಿತಾ ಸುಭಾಷ್

ಬಸ್, ರೈಲು, ಸ್ವಂತ ವಾಹನಗಳಲ್ಲಿ ಓಡಾಡಬೇಕಾದ್ರೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಐಎಲ್‍ಐ, ಸಾರಿ ಮತ್ತು ಇತರ ಅರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ರಿಸಲ್ಟ್ ಬರುವವರೆಗೂ ಮನೆಯಲ್ಲಿ ಪ್ರತ್ಯೇಕವಾಗಿ ಇರಬೇಕು. ಅರ್ಹ ಫಲಾನುಭವಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಪಡೆಯಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: 30 ಸಾವಿರ ದೇವಾಲಯಗಳನ್ನು ವಾಪಸ್ ಪಡೆಯುತ್ತೇವೆ: ಮುತಾಲಿಕ್

ರಾಜ್ಯದಲ್ಲಿ ಕೆಲದಿನಗಳಿಂದ 300ಕ್ಕೂ ಅಧಿಕ ಕೇಸ್‍ಗಳು ದಾಖಲಾಗುತ್ತಿದ್ದು, ಬೆಂಗಳೂರು ನಗರದಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಇದೀಗ ಕೋವಿಡ್‌ ಮಾರ್ಗಸೂಚಿ ಪ್ರಕಟಿಸಿದೆ.

Comments

Leave a Reply

Your email address will not be published. Required fields are marked *