ಭದ್ರಾ ಮೇಲ್ದಂಡೆ ಶೀಘ್ರದಲ್ಲಿ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ: ಗೋವಿಂದ ಕಾರಜೋಳ

ನವದೆಹಲಿ: ಭದ್ರಾ ಮೇಲ್ದಂಡೆ ಶೀಘ್ರದಲ್ಲಿಯೇ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆಗೆ ಈ ಬಗ್ಗೆ ಚರ್ಚಿಸಿದ್ದು ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗಲಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯು ಬೃಹತ್ ನೀರಾವರಿ ಯೋಜನೆಯಾಗಿದ್ದು, 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಮೂಲಕ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಹಾಗೂ ಈ ಜಿಲ್ಲೆಗಳ 367 ಕೆರೆಗಳನ್ನು ಅವುಗಳ ಸಾಮಥ್ರ್ಯದ ಶೇ.50 ರಷ್ಟನ್ನು ತುಂಬಿಸುವ ಯೋಜನೆಯಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಎಲ್ಲಾ ಅರ್ಹತೆ ಹೊಂದಿದ್ದು, ಈಗಾಗಲೇ ಅವಶ್ಯವಿರುವ ಎಲ್ಲ ಪೂರಕ ಅನುಮೋದನೆಗಳನ್ನು ಕೇಂದ್ರ ಜಲ ಆಯೋಗ ಮತ್ತು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಿಂದ ಪಡೆದುಕೊಂಡಿದೆ. ಕೇಂದ್ರದ ಜಲಶಕ್ತಿ ಮಂತ್ರಾಲಯವು 14ನೇ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ. ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ಚಿದಂಬರಂ

ಅತಿ ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸಂಬಂಧಿಸಿದ ಕೇಂದ್ರ ಸಚಿವರುಗಳಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಗೆ ಮನವಿ ಮಾಡಿದ್ದು, ಅವರೂ ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರದಲ್ಲಿ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಸಿಗಲಿದ್ದು, ಇದು ಕರ್ನಾಟಕದ ಮೊದಲನೆಯ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು.

21,473.67 ಕೋಟಿಯ ಯೋಜನೆಯಾಗಿದ್ದು, ರಾಷ್ಟ್ರೀಯ ಯೋಜನೆಯಾಗಿ ಪರಿಗಣಿತವಾದ ನಂತರ ಕೇಂದ್ರ ಸರ್ಕಾರ ಈ ಯೋಜನೆಗೆ 16125.48 ( ಸೂಕ್ಷ್ಮ ನೀರಾವರಿ ಹೊರತುಪಡಿಸಿ) ಕೋಟಿ ವೆಚ್ಚದಲ್ಲಿ ಶೇ.60 ರಷ್ಟು ಅಂದರೆ ರೂ. 9675.29 ಕೋಟಿಗಳನ್ನು ಭರಿಸಲಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

Live Tv

Comments

Leave a Reply

Your email address will not be published. Required fields are marked *