MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?

ಮುಂಬೈ: ಶಿವಸೇನೆಯ ಪ್ರಭಾವಿ ನಾಯಕ ಏಕನಾಥ್ ಶಿಂಧೆ ಈಗ ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಲುಗಾಡಿಸುತ್ತಿದ್ದಾರೆ.

ಸುಮಾರು 20 ರಿಂದ 25 ಮಂದಿ ಶಾಸಕರೊಂದಿಗೆ ಸೂರತ್‍ನಲ್ಲಿರುವ ಹೋಟೆಲ್ ಲೆ ಮೆರಿಡಿಯನ್‍ನಲ್ಲಿ ತಂಗಿರುವ ಏಕನಾಥ್ ಶಿಂಧೆಯವರು ಮುಂಬೈ ಪಕ್ಕದಲ್ಲಿರುವ ಥಾಣೆಯಲ್ಲಿ ಶಿವಸೇನೆ ಪಕ್ಷದ ದೊಡ್ಡ ನಾಯಕರಾಗಿದ್ದಾರೆ. ಪ್ರಸ್ತುತ ನಗರಾಭಿವೃದ್ಧಿ ಶಾಸಕರಾಗಿರುವ ಏಕನಾಥ್ ಶಿಂಧೆ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಹೊಂದಿದ್ದರು.

2004, 2009, 2014, ಮತ್ತು 2019 ಹೀಗೆ ಸತತವಾಗಿ ನಾಲ್ಕು ಬಾರಿ ವಿಧಾನಸಭೆ ಆಯ್ಕೆಯಾಗಿರುವ ಇವರು 2014ರಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಏಕನಾಥ್ ಶಿಂಧೆಯವರು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ನಂತರದ ದಿನಗಳಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೂಡ ಆಯ್ಕೆಯಾಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ? – ಶೀಘ್ರವೇ ಬಿಜೆಪಿ ಅಧಿಕಾರಕ್ಕೆ

ಹೆಚ್ಚಿನ ಸಂಖ್ಯೆಯ ಜನರ ಬೆಂಬಲವನ್ನು ಹೊಂದಿರುವ ಏಕನಾಥ್ ಶಿಂಧೆಯವರಿಗೆ ಪಕ್ಷದಲ್ಲಿ ದೊಡ್ಡ, ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ಹೊಂದಿದ್ದರು. ಅವರ ಪುತ್ರ ಶ್ರೀಕಾಂತ್ ಶಿಂಧೆ ಲೋಕಸಭಾ ಸಂಸದರಾಗಿದ್ದು, ಅವರ ಸಹೋದರ ಪ್ರಕಾಶ್ ಶಿಂಧೆ ಕೌನ್ಸಿಲರ್ ಆಗಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ – ಬಿಜೆಪಿಯ ಐವರು ಆಯ್ಕೆ

Live Tv

Comments

Leave a Reply

Your email address will not be published. Required fields are marked *