ಕೊಲಂಬೊ: ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ನಿವಾಸದಲ್ಲಿ ದೊಡ್ಡ ಮೊತ್ತದ ಹಣವನ್ನು ಪತ್ತೆ ಹಚ್ಚಿದ್ದಾರೆ.
ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಲಕ್ಷಾಂತರ ರೂ. ಹಣವನ್ನು ಪತ್ತೆ ಮಾಡಿದ್ದಾರೆ. ಹಣವನ್ನು ತೆಗೆದುಕೊಂಡು ಎಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 1.78 ಲಕ್ಷ ರೂ. (17.8 ಮಿಲಿಯನ್ ಶ್ರೀಲಂಕನ್ ರುಪಿ) ಪ್ರತಿಭಟನಾಕಾರರಿಗೆ ಸಿಕ್ಕಿತ್ತು. ನಂತರ ಅದನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
https://twitter.com/SJIMYAKUS/status/1546005772920066049?ref_src=twsrc%5Etfw%7Ctwcamp%5Etweetembed%7Ctwterm%5E1546005772920066049%7Ctwgr%5E%7Ctwcon%5Es1_&ref_url=https%3A%2F%2Fwww.hindustantimes.com%2Fworld-news%2Fprotestors-find-millions-in-cash-at-sri-lanka-president-rajapaksa-s-mansion-101657432246136.html
ರಾಜಪಕ್ಸೆ ಮನೆತನದ ಆಡಳಿತ ವಿರೋಧಿಸಿ ಶ್ರೀಲಂಕಾ ಜನತೆ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶಿತ ಜನಸಮೂಹ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ಲಗ್ಗೆಯಿಟ್ಟು ದಾಂಧಲೆ ಸೃಷ್ಟಿಸಿದರು. ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡಿದರು. ಅಡುಗೆ ಕೋಣೆಯಲ್ಲಿನ ತಿಂಡಿ-ತಿನಿಸು ತಿಂದರು. ಹಾಸಿಗೆಯಲ್ಲಿ ಬಿದ್ದು ಹೊರಳಾಡಿದರು.
ಇದೇ ವೇಳೆ ಪ್ರತಿಭಟನಾಕಾರರು ರಾಜಪಕ್ಸೆ ಅವರ ತಿಜೋರಿಯನ್ನೂ ಪತ್ತೆ ಹಚ್ಚಿ ಹಣವನ್ನು ತೆಗೆದುಕೊಂಡಿದ್ದಾರೆ. ಅಧ್ಯಕ್ಷರ ನಿವಾಸದಿಂದ ಪ್ರತಿಭಟನಾಕಾರರು ಇನ್ನೂ ಹೊರಬಂದಿಲ್ಲ. ಅಲ್ಲೇ ಠಿಕಾಣಿ ಹೂಡಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರ ನಡುವೆ ನಿನ್ನೆ ರಾತ್ರಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು.

Leave a Reply