ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು, ಮಾಜಿ ಸಚಿವ ಬಾಬುರಾವ್ ಚಿಂಚನಸೂರುಗೆ ಟಿಕೆಟ್ ನೀಡಿದೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಸಿ.ಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಇದೀಗ ಈ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಫೈನಲ್ ಮಾಡಿದೆ. ಕೋಲಿ ಸಮುದಾಯದ ಬಾಬೂರಾವ್ ಚಿಂಚನಸೂರ್ಗೆ ಟಿಕೆಟ್ ನೀಡಿದೆ.

ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಅವರು ಮಾರ್ಚ್ 31ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿರುವಂತ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ ಎಂದು ಜುಲೈ 25ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಆ.1ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್
ನಾಮಪತ್ರಗಳ ಪರಿಶೀಲನೆ ದಿನ ಆ. 2ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ಆ. 4 ಆಗಿದೆ. ಆ. 11ರಂದು ಮತದಾನ ನಡೆಯಲಿದೆ. ಅದೇ ದಿನ ಸಂಜೆ ಸಂಜೆ 5 ಗಂಟೆಗೆ ಮತಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಇದನ್ನೂ ಓದಿ: ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

Leave a Reply