ಗಾಂಧೀನಗರ: ನಗರದ ಇಸಾನ್‍ಪುರ ಪ್ರದೇಶದಲ್ಲಿರುವ ದೇವಸ್ಥಾನದ ರಸ್ತೆ ಬಳಿ ಪ್ರಾಣಿಗಳ ಮಾಂಸ ಪತ್ತೆಯಾದ ಹಿನ್ನೆಲೆ ಅಹಮದಾಬಾದ್ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಪ್ರಾಣಿಗಳ ಮಾಂಸ ಪತ್ತೆಯಾದ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಸ್ಥಳೀಯ ನಿವಾಸಿಗಳು ಪ್ರಾಣಿಗಳನ್ನು ಕೊಂದವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು ಹಾಗೂ ಹಿಂದೂ ಸಂಘಟನೆಗಳು ಕೂಡ ಈ ಪ್ರದೇಶದಲ್ಲಿ ಬಂದ್‍ಗೆ ಕರೆ ನೀಡಿದ್ದವು. ಇದನ್ನೂ ಓದಿ: ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೇಟ್‍ನಿಂದ ಹೊಡೆದು ಕೊಲೆಗೈದ್ರು

ಹೀಗಾಗಿ ಈ ಘಟನೆ ಸಂಬಂಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ನಂತರ ಈ ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನನು ಪರಿಶೀಲಿಸಿ, ಅದರ ಆಧಾರದ ಮೇಲೆ ಅಹಮದಾಬಾದ್ ಕ್ರೈಂ ಬ್ರಾಂಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಫೈಜಾನ್ ಶೇಖ್ ಎಂಬಾತನನ್ನು ಬಂಧಿಸಿದ್ದಾರೆ.
ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯ ವಿಭಾಗದ (ಎಫ್‍ಎಸ್‍ಎಲ್) ವರದಿಗಾಗಿ ಮಾಂಸದ ಮಾದರಿಯನ್ನು ಕಳುಹಿಸಿದ್ದಾರೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದನ್ನೂ ಓದಿ: ವಿಶ್ವದ ದೊಡ್ಡಣ್ಣನಿಗೆ ಸೆಡ್ಡು ಹೊಡೆದ ಚೀನಾ: ಅಮೆರಿಕದ ಹೌಸ್ ಆಫ್ ಸ್ಪೀಕರ್‌ಗೆ ನಿರ್ಬಂಧ
ಈ ಕುರಿತಂತೆ ವಿಚಾರಣೆ ವೇಳೆ ಆರೋಪಿ ರಸ್ತೆಯಲ್ಲಿ ಬಿದ್ದಿದ್ದ ಮಾಂಸವನ್ನು ನಾನು ಬೇರೆಡೆಗೆ ಸಾಗಿಸುತ್ತಿದ್ದೆ. ಆದರೆ ಈ ವೇಳೆ ಜನರು ಹಲ್ಲೆ ನಡೆಸಲು ಮುಂದಾದಾಗ ಹೆದರಿಕೊಂಡು ಕೆಳಗೆ ಬಿದ್ದಿದ್ದ ಮಾಂಸದ ತುಂಡುಗಳನ್ನು ಎತ್ತುವುದನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಸದ್ಯ ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply