ಮಡಿಕೇರಿ: ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ (Chetan) ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ (Madikeri) ದೂರು ದಾಖಲಿಸಿದೆ.

ಯುವಸೇನೆಯ ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಅವರು ಡಿವೈಎಸ್‍ಪಿಗೆ ದೂರು ಸಲ್ಲಿಸಿ ಚೇತನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ದೈವಾರಾಧನೆಯ ಕಥೆಯಾಧಾರಿತ ‘ಕಾಂತಾರ’ (Kantara)ಚಿತ್ರ ಹಾದಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದೆ ಮತ್ತು ದೈವಶಕ್ತಿಯನ್ನು ಪ್ರತಿಬಿಂಬಿಸಿದೆ. ಇದನ್ನೂ ಓದಿ: ಮುಂದಿನ ವರ್ಷದಿಂದ ದೀಪಾವಳಿಗೆ ನ್ಯೂಯಾರ್ಕ್ ನಗರದಲ್ಲಿ ಶಾಲೆಗಳಿಗೆ ರಜೆ
ಚಿತ್ರ ಲಕ್ಷಾಂತರ ಭಕ್ತರ ಮನಸೂರೆಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಚೇತನ್ ದೈವಾರಾಧನೆಯ ಕುರಿತು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರವೀಣ್ ಅಸಮಾಧಾನ ವ್ಯಕ್ತಪಡಿಸಿದರು. ಯುವಸೇನೆಯ ಮುಖಂಡ ಕುಲ್ಲೀಪ್ ಪೂಣಚ್ಚ ಕೂಡ ಚೇತನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದನ್ನೂ ಓದಿ: ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಟಿ20 ವಿಶ್ವಕಪ್ ಟೂರ್ನಿಯಿಂದಲೇ ಔಟ್

Leave a Reply