ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಪತ್ನಿಗೆ (Wife) ಅನೈತಿಕ ಸಂಬಂಧ ಇದೆ ಎಂದು ಅನುಮಾನ ಹೊಂದಿದ್ದ ಪತಿ (Husband) ಆಕೆಯನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಉಳ್ಳಾಲ (Ullal) ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಪಿಲಾರ್‌ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಶೋಭಾ (46) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರಾದ ಶೋಭಾ ಹಾಗೂ ಶಿವಾನಂದ (55) ದಂಪತಿಯ ನಡುವೆ ಮದುವೆಯಾದಾಗಿನಿಂದಲೂ ವಿರಸವಿತ್ತು. ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನ ಶಿವಾನಂದನನ್ನು ಎಂದಿಗೂ ಕಾಡುತ್ತಿತ್ತು.

ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದ ಶೋಭಾ ಹಾಗೂ ಶಿವಾನಂದ ದಂಪತಿ ತಮ್ಮ ಪುತ್ರನ ಜೊತೆಯಲ್ಲಿ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಪುತ್ರ ಕಾರ್ತಿಕ್ ಕೆಲಸಕ್ಕೆ ತೆರಳಿದ ಬಳಿಕ ಘನಘೋರ ದುರಂತವೊಂದು ಸಂಭವಿಸಿದೆ. ಪತ್ನಿಯ ಜೊತೆ ಬೆಳ್ಳಂಬೆಳಗ್ಗೆ ಜಗಳ ಶುರುವಿಟ್ಟುಕೊಂಡಿದ್ದ ಶಿವಾನಂದ, ಈ ಜಗಳ ವಿಕೋಪಕ್ಕೆ ತಿರುಗಿದ್ದೇ ತಡ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಸಂಬಂಧಿಕರಿಗೆ ಕರೆ ಮಾಡಿ, ನಾನು ಸಾಯುತ್ತೇನೆ. ನನ್ನ ಶವಕ್ಕೆ ಮುಡಿಸಲು ಹೂವು ತನ್ನಿ ಎಂದು ಹೇಳಿ ಕಾಲ್ ಇಟ್ಟವನೇ ಅಲ್ಲೇ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ರಸಗುಲ್ಲ ಖಾಲಿಯಾಗಿದ್ದಕ್ಕೆ ವಧು-ವರನ ಕುಟುಂಬದ ಮಧ್ಯೆ ಡಿಶುಂ ಡಿಶುಂ – ಯುವಕ ಸಾವು

crime

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೊಲೀಸರು ಮೃತ ದಂಪತಿಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಒಟ್ಟಿನಲ್ಲಿ ಮಕ್ಕಳ ಪ್ರಗತಿಯನ್ನು ನೋಡುತ್ತಾ ಜೊತೆಯಾಗಿ ಬಾಳಬೇಕಿದ್ದ ದಂಪತಿ ಈ ರೀತಿ ದಾರುಣ ಅಂತ್ಯ ಕಂಡಿದ್ದು ದುರಂತವೇ ಸರಿ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *