`ರಾಷ್ಟ್ರಪತಿಗಳು ಸುಂದರವಾಗಿಲ್ಲ’ ಎಂದ TMC ನಾಯಕನ ಪರವಾಗಿ ಕ್ಷಮೆ ಕೋರಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕುರಿತು ಟಿಎಂಸಿ (TMC) ಸಚಿವರು ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ರಾಷ್ಟ್ರಪತಿಯವರಲ್ಲಿ (President Of India) ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ವೈಯಕ್ತಿಕವಾಗಿ ಟೀಕಿಸುವುದು ಪಕ್ಷದ ಸಂಸ್ಕೃತಿಯಲ್ಲ ಎಂದಿದ್ದು, ಸಚಿವರಿಗೂ ಎಚ್ಚರಿಕೆ ನೀಡಿದ್ದಾರೆ.

ನಾವು ರಾಷ್ಟ್ರಪತಿಗಳನ್ನು ತುಂಬಾ ಗೌರವಿಸುತ್ತೇವೆ. ಅವರು ತುಂಬಾ ಒಳ್ಳೆಯವರು ಅಂಥವರನ್ನು ಟೀಕಿಸಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸೌಂದರ್ಯವು ನಾವು ಬಾಹ್ಯವಾಗಿ ಹೇಗೆ ಕಾಣುತ್ತೇವೆ ಎಂಬುದಲ್ಲ, ಆಂತರಿಕವಾಗಿ ಹೇಗಿದ್ದೀವಿ ಎಂಬುದರ ಮೇಲೆ ಇದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್‌’ ಸ್ಫೂರ್ತಿ – ರೋಚಕ ಸತ್ಯ ಬಯಲು

ಟಿಎಂಸಿ (TMC) ಸಚಿವ ಅಖಿಲ್ ಗಿರಿ, ನಂದಿಗ್ರಾಮ್‌ನ ಹಳ್ಳಿಯೊಂದರಲ್ಲಿ ನಡೆದ ರ‍್ಯಾಲಿಯಲ್ಲಿ ರಾಷ್ಟ್ರಪತಿಗಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅವರು ಮಾತನಾಡಿದ ಅವರ 17 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿತ್ತು. ಈ ವೀಡಿಯೋನಲ್ಲಿ `ನಾವು ಯಾರನ್ನು ನೋಟದಿಂದ ನಿರ್ಣಯಿಸುವುದಿಲ್ಲ. ಆದರೆ ನಮ್ಮ ರಾಷ್ಟ್ರಪತಿಗಳು ನೋಡಲು ಹೇಗೆ ಕಾಣುತ್ತಾರೆ? ಅವರು ಸುಂದರವಾಗಿಲ್ಲ’ ಎಂದು ಹೇಳಿದ್ದರು. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು

ಟಿಎಂಸಿ ಸಚಿವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ರಾಜಭವನಕ್ಕೆ ಮೆರವಣಿಗೆ ನಡೆಸಿದ್ದರು. ಸಚಿವ ಅಖಿಲ್ ಗಿರಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *