ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ – ಬೈಕ್‌ನಿಂದ ಬಿದ್ದು ವ್ಯಕ್ತಿ ಕೋಮಾ

ಬೆಂಗಳೂರು: (Bengaluru) ರಾಜಧಾನಿಯಲ್ಲಿ ರಸ್ತೆ ಗುಂಡಿಗಳಿಂದ ಒಂದಿಲ್ಲೊಂದು ಅವಾಂತರ ಸೃಷ್ಟಿಯಾಗುತ್ತಲೇ ಇದೆ. ಯಮ ಸ್ವರೂಪಿ ರಸ್ತೆ ಗುಂಡಿಗೆ ಅನೇಕ ಜೀವಗಳು ಬಲಿಯಾಗಿವೆ. ಈಗ ರಸ್ತೆ ಗುಂಡಿಗೆ ಬಿದ್ದು ಬೈಕ್‌ ಸವಾರ ಕೋಮಾ ಸ್ಥಿತಿಯಲ್ಲಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ವಿದ್ಯಾರಣ್ಯಪುರಂ ನಿವಾಸಿ ಸಂದೀಪ್‌ ಎಂಬ ವ್ಯಕ್ತಿ ಕೋಮಾ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ರಸ್ತೆ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ವೇತನ ಸಮಸ್ಯೆ – 108 ಅಂಬುಲೆನ್ಸ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೆಲ ದಿನಗಳ ಹಿಂದೆಯಷ್ಟೇ ನಗರದಲ್ಲಿ ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ವಿಚಾರವಾಗಿ ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಸಾರ್ವಜನಿಕರು ಕಿಡಿಕಾರಿದರು. ಇದರ ಬೆನ್ನಲ್ಲೇ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳಿಗೆ ಸಿಎಂ ವಾರ್ನಿಂಗ್ ಮಾಡಿದ ಬೆನ್ನಲ್ಲೇ ಕೆಲವೆಡೆ ರಾತ್ರೋರಾತ್ರಿ ಗುಂಡಿ ಮುಚ್ಚುವ ಕಾರ್ಯ ನಡೆದಿದೆ. ಬಸವೇಶ್ವರ ನಗರ ಮುಖ್ಯ ರಸ್ತೆ, ಯಶವಂತಪುರದ ದೀನದಯಾಳ್‌ ಮೇಲ್ಸೇತುವೆಯಲ್ಲಿ ರಸ್ತೆ ರಿಪೇರಿ ಕಾರ್ಯ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

ಇತ್ತ ಗುಂಡಿ ಮುಚ್ಚುವ ಯೋಗ್ಯತೆ ಇಲ್ಲದ ಬಿಬಿಎಂಪಿಗೆ, ಗುಂಡಿಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರ ಕೊಡುವ ಯೋಗ್ಯತೆಯೂ ಇಲ್ಲವಾಗಿದೆ. ಗುಂಡಿ ಅಪಘಾತದಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ಬಿಬಿಎಂಪಿ ಸತಾಯಿಸುತ್ತಿದೆ. ತಂದೆ-ತಾಯಿ ಇಲ್ಲದ ಯುವತಿ ಬದುಕು ನರಕ ಆಗಿದ್ದು, ಪರಿಹಾರ ಇಲ್ದಿದ್ರೆ ಕೆಲಸನಾದ್ರೂ ಕೊಡಿ ಅಂತಾ ಗೋಗರೆಯುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *