ಮಂಡ್ಯದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ!

ಮಂಡ್ಯ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸಮೀಪದಲ್ಲಿ ನಡೆದಿದ್ದು, ಸ್ಥಳೀಯರಿಂದ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ದೊಡ್ಡಬ್ಯಾಡರಹಳ್ಳಿ ಗ್ರಾಮದ ಮರೀಗೌಡ(48) ಆತನ ಪತ್ನಿ ರಜನಿ(44) ದಂಪತಿಯ ಮಕ್ಕಳಾದ ಚಂದ್ರ(13) ಹಾಗೂ ಚೇತನ್(10) ಆತ್ಮಹತ್ಯೆಗೆ ಯತ್ನಿಸಿದವರು. ಮರೀಗೌಡ ಅವರ ಕುಟುಂಬವು ಬೆಂಗಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ಇಂದು ಮರೀಗೌಡ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕರೆದುಕೊಂಡು ಗಣಂಗೂರು ಗ್ರಾಮದ ಸಮೀಪ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಎಲ್ಲರಿಗೂ ವಿಷ ಕುಡಿಸಿ ತಾವು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.

ಅಸ್ವಸ್ಥಗೊಂಡು ಕಾರಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ನೋಡಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತ್ಮಹತ್ಯೆಗೆ ಯತ್ನಿಸಿದ್ದ ನಾಲ್ವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *