ಜೆಡಿಎಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿಕೊಂಡ ಮಾಜಿ ಸಚಿವ ಎ.ಮಂಜು

ಹಾಸನ: ಚುನಾವಣೆ (Election) ಸಮೀಪಿಸುತ್ತಿದ್ದು ಚುನಾವಣಾ ಕಣ ರಂಗೇರುತ್ತಿದೆ. ಅರಕಲಗೂಡು (Arakalagudu) ವಿಧಾನಸಭಾ ಕ್ಷೇತ್ರದ ಜೆಡಿಎಸ್ (JDS) ಅಭ್ಯರ್ಥಿ ನಾನೇ ಎಂದು ಮಾಜಿ ಸಚಿವ ಎ. ಮಂಜು (A Manju) ಅಧಿಕೃತವಾಗಿ ಘೋಷಣೆ ಮಾಡಿಕೊಂಡಿದ್ದಾರೆ.

ಸ್ವಗ್ರಾಮ ಅರಕಲಗೂಡು ತಾಲೂಕಿನ ಹನ್ಯಾಳು ಗ್ರಾಮದಲ್ಲಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿದ ಎ.ಮಂಜು, ಎಲ್ಲರ ಸಮ್ಮುಖದಲ್ಲಿ ನಾನು ಜೆಡಿಎಸ್‌ನಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು.‌ ನಂತರ ನೆರೆದಿದ್ದವರಿಂದ ಆಣೆ‌ ಪ್ರಮಾಣ ಮಾಡಿಸಿದರು.

ಇಂದಿನಿಂದ ಜೆಡಿಎಸ್‌ಗೆ ಸೇರಿ ಮಂಜು ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು. ಇನ್ಮೇಲೆ ನಾವೆಲ್ಲರೂ ಜೆಡಿಎಸ್ ಎಂದು ಕೈಮುಂದೆ ಚಾಚಿ ಆಣೆ ಪ್ರಮಾಣ ಮಾಡಿದರು.

ಇದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಎ. ಮಂಜುವಿಗೆ ಜೈಕಾರ ಕೂಗಿದರು. ಇತ್ತೀಚೆಗಷ್ಟೇ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಎ.ಮಂಜುಗೆ ಟಿಕೆಟ್ ಕೊಡುತ್ತೇವೆ ಎಂದು ಹೆಚ್‌ಡಿಕೆ ಹೇಳಿದ್ದರು. ಇದನ್ನೂ ಓದಿ: ದೇವರನ್ನು ಹೊತ್ತು ಕುಣಿದು ವಿಶೇಷ ಸೇವೆ ಸಲ್ಲಿಸಿದ ಬಿಜೆಪಿ ಶಾಸಕ

ಮಾ.11/12ರಂದು ಜೆಡಿಎಸ್‌ಗೆ ಅಧಿಕೃತ ಸೇರ್ಪಡೆ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಎ. ಮಂಜು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಹೆಚ್‌ಡಿಡಿ ನಿವಾಸದಲ್ಲಿ ಭೇಟಿ ಮಾಡಿ ಅಂತಿಮ ಹಂತದ ಮಾತುಕತೆ ನಡೆಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಉಪಸ್ಥಿತರಿದ್ದರು. ಮಾ.11 ಅಥವಾ ಮಾ.12ರಂದು ಬೆಂಗಳೂರಿನಲ್ಲಿ ದೇವೇಗೌಡರ ಸಮ್ಮುಖದಲ್ಲಿ ಎ. ಮಂಜು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಮಾ.16 ರಂದು ಅರಕಲಗೂಡಿನಲ್ಲಿ ಪಂಚರತ್ನ ಯಾತ್ರೆ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ಸಿಎಂ ರಾಜೀನಾಮೆ ಕೊಡಬೇಕು- ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Comments

Leave a Reply

Your email address will not be published. Required fields are marked *