ಸಿಗರೇಟ್ ಹೊಗೆ ಬಿಟ್ಟಿದ್ದನ್ನ ಪ್ರಶ್ನಿಸಿದ ಯುವಕನ ಮೇಲೆ ರೌಡಿಶೀಟರ್‌ನಿಂದ ಹಲ್ಲೆ

ಬೆಂಗಳೂರು: ಸಿಗರೇಟ್ ಸೇದಿ ಹೊಗೆ ಬಿಟ್ಟಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ರೌಡಿಶೀಟರ್ ಒಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಸಂಪಿಗೆಹಳ್ಳಿ ಬಳಿಯ ಹೆಗಡೆ ನಗರದಲ್ಲಿ ಇಂದು ಘಟನೆ ನಡೆದಿದ್ದು, ರೌಡಿಶೀಟರ್ ಜಲಕ್, ಕುಮಾರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ವಿವರ: ರೌಡಿಶೀಟರ್ ಜಲಕ್ ಸಿಗರೇಟ್ ಸೇದುತ್ತಿದ್ದ. ಈ ವೇಳೆ ಅಲ್ಲಿಯೇ ನಿಂತಿದ್ದ ಕುಮಾರ್ ಕಡೆಗೆ ಹೊಗೆ ಬಿಟ್ಟಿದ್ದಾನೆ. ಇದರಿಂದ ಕೋಪಗೊಂಡ ಕುಮಾರ್, ಯಾಕೆ ಹೀಗೆ ಮಾಡಿದ್ದು ಎಂದು ಪ್ರಶ್ನಿಸಿದ್ದಾನೆ. ನನ್ನನ್ನೇ ಪ್ರಶ್ನಿಸುತ್ತೀಯಾ ಅಂತಾ ಜಲಕ್ ಜಗಳಕ್ಕೆ ಇಳಿದಿದ್ದಾನೆ. ಇಬ್ಬರ ನಡುವೆ ವಾಗ್ದಾಳಿ ನಡೆದು, ಕುಮಾರ್ ಮೇಲೆ ಜಲಕ್ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಹಲ್ಲೆಗೆ ಒಳಗಾಗಿದ್ದ ಕುಮಾರ್ ಗಂಭೀರವಾಗಿ ಗಾಯಗೊಂಡು ರಕ್ತಸ್ರಾವದಿಂದ ಬಳಲುತ್ತಿದ್ದ. ಘಟನಾ ಸ್ಥಳದಲ್ಲಿದ್ದ ಜನರು ತಕ್ಷಣವೇ ಕುಮಾರ್‍ನನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಸಂಪಿಗೆಹಳ್ಳಿ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಜಲಕ್ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *