ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ – ಹೊತ್ತಿ ಉರಿದ ಕಾರ್ಖಾನೆ

– 200 ಮಂದಿ ಸಿಲುಕಿರುವ ಶಂಕೆ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಟೇಪ್ ತಯಾರಿಕಾ ಕಾರ್ಖಾನೆ ಹೊತ್ತಿ ಉರಿದ ಘಟನೆ ತಾಲೂಕಿನ ನಾವಗೆ ಗ್ರಾಮದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ 200 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಒಳಗೆ ಹಲವು ಜನ ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಘಟನೆ ಬಗ್ಗೆ ಪ್ರತಿಕ್ರಿಯಿದ್ದು, ಇಡೀ ಜಿಲ್ಲಾಡಳಿತ ಸ್ಥಳದಲ್ಲಿ ಇದೆ. ಆಸ್ಪತ್ರೆಯಲ್ಲಿ 200 ಬೆಡ್ ತಯಾರಿಡಲು ಸೂಚಿಸಲಾಗಿದೆ ಎಂದಿದ್ದಾರೆ.