ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಕೊಲೆ ಆರೋಪ

ಬೆಂಗಳೂರು: ಇಲ್ಲಿನ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಪತ್ನಿಯ ಕುಟುಂಬಸ್ಥರು ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ.

ರಶ್ಮಿ (32) ಮೃತ ಮಹಿಳೆ. ಮಂಡ್ಯ (Mandya) ಮೂಲದ ರಶ್ಮಿ ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಇದನ್ನೂ ಓದಿ: 10 ರೂ.ನ 30 ನೋಟು ಎಣಿಸಲು ಸಾಧ್ಯವಾಗದ ವರ- ಮದುವೆ ಕ್ಯಾನ್ಸಲ್ ಮಾಡಿದ ವಧು

ಅರವಿಂದ್ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ (Engineer) ಆಗಿ, ರಶ್ಮಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪತಿಯ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರೆ, ಪತ್ನಿಯ ಕುಟುಂಬಸ್ಥರು ಕೊಲೆ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಶನಿವಾರದಿಂದ ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ – 22% ಟೋಲ್ ದರ ಹೆಚ್ಚಳ

ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು (Subramanyapura Police) ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.