ಕುಂಭಮೇಳದಿಂದ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳದ ಯುವಕ ದುರಂತ ಸಾವು

ನವದೆಹಲಿ: ಪ್ರಯಾಗ್‌ರಾಜ್ (Prayagraj) ಹೋಗಿ, ಅಲ್ಲಿಂದ ಅಯೋಧ್ಯೆಗೆ (Ayodhye) ತೆರಳುವಾಗ ರೈಲಿನಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಗೋರಖಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮೃತ ಯುವಕನನ್ನು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ (27) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: 8 ವರ್ಷದಲ್ಲಿ 46 ಮಂದಿ ಜಲಸಮಾಧಿ: ಸಾವಿನ ಕೂಪವಾದ ವಿಸಿ ನಾಲೆ

ಹದಿನೈದು ದಿನಗಳ ಹಿಂದೆ ಪ್ರವೀಣ್ ಪ್ರಯಾಗರಾಜ್‌ಗೆ ಹೋಗಿದ್ದರು. ಪ್ರಯಾಗ್‌ರಾಜ್‌ಗೆ ತೆರಳಿ ಬಳಿಕ ಅಲ್ಲಿಂದ ಅಯೋಧ್ಯೆಗೆ ರೈಲಿನಲ್ಲಿ ಹೋಗುತ್ತಿದ್ದರು. ಈ ವೇಳೆ ಗೋರಖಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಗುಲಿ ತೀವ್ರ ಗಾಯಗೊಂಡಿದ್ದರು. ಸ್ಥಳದಲ್ಲಿದ್ದ ರೈಲ್ವೆ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಗೋರಖ್‌ಪುರ ಬಿಆರ್‌ಡಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಮಂಗಳವಾರ ಅಸುನೀಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದು, ಸದ್ಯ ಮೃತ ಪ್ರವೀಣ್ ಶವ ತರಲು ಕುಟುಂಬಸ್ಥರು ವ್ಯವಸ್ಥೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಡವರ ಮನೆಯಲ್ಲಿ ಫೋಟೋಶೂಟ್‌ ಮಾಡಿಸಿ ಮನರಂಜನೆ ತೆಗೆದುಕೊಳ್ತಾರೆ: ರಾಹುಲ್‌ಗೆ ಮೋದಿ ಕುಟುಕು