ರಸ್ತೆ ಅಪಘಾತದಲ್ಲಿ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿಗೆ ಗಾಯ

Tripathi

ಲಕ್ನೋ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಿಂದ ಹಿಂದಿರುಗುತ್ತಿದ್ದ ವೇಳೆ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿ ಅವರ ಕಾರು ಪಲ್ಟಿಯಾದ ಕಾರಣ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಎಎಪಿಯ ಉತ್ತರ ಪ್ರದೇಶ ಘಟಕದ ವಕ್ತಾರ ಮಹೇಂದ್ರ ಸಿಂಗ್ ಅವರು, ಅಖಿಲೇಶ್ ಪತಿ ತ್ರಿಪಾಠಿ ಅವರು ತಮ್ಮ ಸಹಚರರೊಂದಿಗೆ ಪಕ್ಷದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಗೋರಖ್‍ಪುರದಿಂದ ಹಿಂತಿರುಗುತ್ತಿದ್ದ ವೇಳೆ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅಖಿಲೇಶ್ ಪತಿ ತ್ರಿಪಾಠಿ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

ಇದ್ದಕ್ಕಿಂತದ್ದಂತೆ ಕಾರಿನ ಒಂದು ಚಕ್ರವು ಹೊರಬಂದಿದ್ದರಿಂದ ಕಾರು ಪಲ್ಟಿಯಾಗಿದೆ. ಇನ್ನೂ ಕಾರಿನ ಮುಂಭಾಗದ ಸೀಟಿನಲ್ಲಿ ಅಖಿಲೇಶ್ ಪತಿ ತ್ರಿಪಾಠಿ ಕುಳಿತಿದ್ದರಿಂದ ಅಪಘಾತವಾಗಿದ್ದು, ಶಾಸಕರಿಗೆ ಗಂಭೀರ ಗಾಯಗಳಾಗಿವೆ. ಇದೀಗ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ವೈದ್ಯರು ತ್ರಿಪಾಠಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

Comments

Leave a Reply

Your email address will not be published. Required fields are marked *