ಅಂಬುಲೆನ್ಸ್, ಬೈಕ್ ಮಧ್ಯೆ ಅಪಘಾತ – ಮೂವರು ಸವಾರರು ದುರ್ಮರಣ

ಶಿವಮೊಗ್ಗ: ಅಂಬುಲೆನ್ಸ್ (Ambulence) ಹಾಗೂ ಬೈಕ್ (Bike) ನಡುವೆ ಭೀಕರ ಅಪಘಾತವುಂಟಾದ (Accident) ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.

ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ. ಇದನ್ನೂ ಓದಿ: ಇಂದು ಟಿ-20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯ; ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ-ಭಾರತ ಹಣಾಹಣಿ

ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. ಮೃತರು ಹೊಸ ಜೋಗದ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೂಗಲ್‌ ಟ್ರಾನ್ಸ್‌ಲೇಟ್‌ಗೆ ಸೇರ್ಪಡೆ ಆಯ್ತು ತುಳು!