– ತನಗೇನು ಗೊತ್ತಿಲ್ಲದಂತೆ ಘಟನಾ ಸ್ಥಳದಲ್ಲೇ ಇದ್ದ ದುಷ್ಟ
ದಾವಣಗೆರೆ: ಇತ್ತೀಚೆಗೆ ಚನ್ನಗಿರಿ (Channagiri) ತಾಲೂಕಿನ ಕಾರಿಗನೂರು ಕ್ರಾಸ್ ಬಳಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ (Jewellery) ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಲ್ಲೆಗೊಳಗಾದ ಮಹಿಳೆಯ ತಂಗಿ ಮಗ ಎಂಬುದು ಗೊತ್ತಾಗಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಬಂಧಿತನನ್ನು ನವೀನ್ ಎಂದು ಗುರುತಿಸಲಾಗಿದೆ. ಅ.3ರಂದು ವೀರಮ್ಮ ಅವರ ಮೇಲೆ ಹಲ್ಲೆ ಮಾಡಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ ಆರೋಪಿ ದರೋಡೆ ಮಾಡಿದ್ದ. ಈತ ದುಶ್ಚಟಗಳಿಗೆ ದಾಸನಾಗಿದ್ದ. ಸಾಕಷ್ಟು ಸಾಲ ಮಾಡಿಕೊಂಡಿದ್ದ, ಇದರಿಂದಾಗಿ ಸಾಲಗಾರರ ಕಾಟ ಜಾಸ್ತಿಯಾಗಿತ್ತು. ಅದಕ್ಕಾಗಿ ಹಣ ಹೊಂದಿಸಲು ಈ ರೀತಿ ಸಂಚು ರೂಪಿಸಿದ್ದ. ಬಳಿಕ ತನಗೆ ಏನು ತಿಳಿಯದಂತೆ ಘಟನೆ ನಡೆದ ಸ್ಥಳದಲ್ಲೇ ಇದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು | ಮನೆಗೆ ನುಗ್ಗಿ ಗ್ಯಾಂಗ್ ರೇಪ್ ಮಾಡಿದ್ದ ಕಾಮುಕರ ಬಂಧನ
ಘಟನೆಯಲ್ಲಿ ವೀರಮ್ಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಹಿಳೆಯ ಪತಿ ಉಮಾಪತಿ ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಬಲಿ
