ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಅರೆಸ್ಟ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ವೀರೇಶ್ (24) ಬಂಧಿತ ಆರೋಪಿಯಾಗಿದ್ದು, ನಿನ್ನೆ ಬೆಳಗ್ಗೆ ಬಾಲಕಿ ಮನೆಯಿಂದ ಹೊರ ಬಂದ ವೇಳೆ ಕೃತ್ಯಕ್ಕೆ ಮುಂದಾಗಿದ್ದಾನೆ. ಆದರೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ನೆರವಿಂದ ಬಾಲಕಿ ಪಾರಾಗಿದ್ದಾಳೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ (ಪೋಕ್ಸೋ) ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ನಡೆದ ಪ್ರಿಯಾರೆಡ್ಡಿ ಮೇಲಿನ ಕೊಲೆ, ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು  ಎನ್ ಕೌಂಟರ್ ಮಾಡಿರುವ ಕ್ರಮದ ಬಗ್ಗೆ ಹಲವರು ಮೆಚ್ಚುಗೆ ಸೂಚಿಸಿದ್ದರು. ಕಠಿಣ ಕ್ರಮ ಕೈಗೊಂಡರೆ ಇಂತಹ ಕೃತ್ಯಗಳು ಕಡಿಮೆಯಾಗಬಹುದು ಎಂಬುವುದು ಸಾರ್ವಜನಿಕರ ಅಭಿಪ್ರಾಯವಾಗಿತ್ತು. ಹೈದರಾಬಾದ್ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *