ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು

ಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ಎಡಿಜಿಪಿ ಪ್ರತಾಪ್ ರೆಡ್ಡಿ ಮೂಲಕ ಗೃಹಮಂತ್ರಿ ಕಛೇರಿಯ ಮುಖ್ಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಸಮುದಾಯ ಒಂದರ ಅವಹೇಳನಕ್ಕೆ ಸಂಬಂಧಿಸಿದಂತೆ ಚೇತನ್ ಮೇಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸ್ ಇಲಾಖೆ, ಚೇತನ್ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ. ಹಾಗಾಗಿ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ಅಮೆರಿಕಾಗೆ ಯಾಕೆ?

ಮೂಲತಃ ಮೈಸೂರಿನವರಾದ ಚೇತನ್ ಕುಟುಂಬ ಅಮೆರಿಕಾದಲ್ಲಿ ವಾಸವಿದೆ. ಚೇತನ್ ಅಮೆರಿಕಾದಲ್ಲೇ ಹುಟ್ಟಿ ಬೆಳೆದಿದ್ದಾರೆ. ಅವರು ಅಲ್ಲಿನ ಪೌರತ್ವ ಪಡೆದಿದ್ದಾರೆ. ಹಾಗಾಗಿ ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸಿನಲ್ಲಿ ತಿಳಿಸಲಾಗಿದೆಯಂತೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್

ಆತಂಕದಲ್ಲಿ ನಿರ್ಮಾಪಕರು

ಸದ್ಯ ಚೇತನ್ ಎರಡು ತೆಲುಗು ಮತ್ತು ಒಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮತ್ತೊಂದು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇವರು ಅಮೆರಿಕಾಗೆ ಗಡಿಪಾರಾದರೆ, ಸಿನಿಮಾಗಳ ಗತಿಯೇನು? ಎನ್ನುವ ಆತಂಕ ನಿರ್ಮಾಪಕರದ್ದು. ಅಷ್ಟೂ ಸಿನಿಮಾಗಳು ಸೇರಿ ಹದಿನೈದು ಕೋಟಿಗೂ ಹೆಚ್ಚು ಬಂಡವಾಳವನ್ನು ನಿರ್ಮಾಪಕರು ಚೇತನ್ ಮೇಲೆ ಹೂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

ಗಡಿಪಾರು ವಿಷ್ಯ ಗೊತ್ತೇ ಇಲ್ಲವಂತೆ

ತಮ್ಮನ್ನು ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿರುವ ವಿಷಯ ತಮಗೆ ಗೊತ್ತಿಲ್ಲ ಮತ್ತು ತಮ್ಮ ವಕೀಲರ ಗಮನಕ್ಕೂ ಬಂದಿಲ್ಲ ಎಂದಿದ್ದಾರೆ ಚೇತನ್. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಹೋರಾಟ ನಿರಂತರವಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ. ಎರಡು ದಿನಗಳಿಂದ ಇಂಥದ್ದೊಂದು ಸುದ್ದಿ ಭಾರೀ ಸದ್ದು ಮಾಡುತ್ತಿದ್ದರೂ, ಪೊಲೀಸ್ ಇಲಾಖೆಯಾಗಲಿ, ಸರಕಾರವಾಗಲಿ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

Comments

Leave a Reply

Your email address will not be published. Required fields are marked *