‘ಯುವರತ್ನ’ ನಾಯಕಿಯನ್ನ ವರಿಸಿದ ನಟ ಆರ್ಯ

ಹೈದರಾಬಾದ್: ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಾಯಕತ್ವದ ‘ಯುವರತ್ನ’ ಸಿನಿಮಾದ ನಾಯಕಿ ಸಯ್ಯೇಶಾ ಸೈಗಲ್ ಅವರನ್ನು ತಮಿಳು ನಟ ಆರ್ಯ ಅವರು ಮದುವೆಯಾಗಿದ್ದಾರೆ.

ಮಾರ್ಚ್ 09 ಮತ್ತು 10 ಅಂದರೆ ಶನಿವಾರ ಹಾಗೂ ಭಾನುವಾರ ಈ ಜೋಡಿಯ ವಿವಾಹ ಕಾರ್ಯಕ್ರಮ ನೆರವೇರಿದೆ. ಶನಿವಾರವೇ ಈ ಜೋಡಿಯ ಪ್ರೀ-ವೆಡ್ಡಿಂಗ್ ಕಾರ್ಯಕ್ರಮ ಆರಂಭವಾಗಿದ್ದು, ವಿವಿಧ ರೀತಿಯಲ್ಲಿ ಇಬ್ಬರು ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಇವರ ವೆಡ್ಡಿಂಗ್ ಫೋಟೋಗಳನ್ನು ವಧು ಸಯ್ಯೇಶಾ ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಇಬ್ಬರು ಪ್ಯಾಲೇಸ್‍ನಲ್ಲಿ ರಾಜ-ರಾಣಿ ರೀತಿಯ ಉಡುಪನ್ನು ಧರಿಸಿ ಮಿಂಚಿದ್ದಾರೆ.

ಹೈದರಾಬಾದ್‍ನ ತಾಜ್ ಫುಕ್ನಮ್ ಪ್ಯಾಲೇಸ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆ ಸಮಾರಂಭ ನಡೆದಿದೆ. ಇವರ ಮದುವೆಯಲ್ಲಿ ಬಾಲಿವುಡ್ ಮತ್ತು ಕಾಲಿವುಡ್‍ನ ಖ್ಯಾತ ನಟ ನಟಿಯರು ಪಾಲ್ಗೊಂಡಿದ್ದು, ನವ ಜೋಡಿಗಳಿಗೆ ಶುಭಾಶಯ ತಿಳಿಸಿದ್ದಾರೆ.

ಈ ಹಿಂದೆ ನಟ ಆರ್ಯ ಅವರು ಪ್ರೇಮಿಗಳ ದಿನಾಚರಣೆಯ ದಿನವೇ ತಮ್ಮ ಮದುವೆಯಾಗುವ ಹುಡುಗಿ ಹಾಗೂ ವಿವಾಹದ ಬಗ್ಗೆ ತಿಳಿಸಿದ್ದರು. 2018 ರ `ಘಜಿನಿಕಾಂತ್’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಯ್ಯೇಷಾ ಅವರು ನಟ ಆರ್ಯರನ್ನು ಭೇಟಿಯಾಗಿದ್ದು, ಅಂದಿನಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಯ್ಯೇಷಾ ಅವರು ನಟ-ನಿರ್ಮಾಪಕ ಸುಮೇತ್ ಸೈಗಲ್ ಮತ್ತು ನಟಿ ಶಹೀನ್ ಬಾನು ಅವರ ಮಗಳಾಗಿದ್ದು, ಶಹೀನ್ ಅವರು `ಮಹಾ-ಸಂಗ್ರಮ್’ ಮತ್ತು’ ಆಯಿ ಮಿಲಾನ್ ಕಿ ರಾತ್’ ನಂತಹ ಸಿನಿಮಾದಲ್ಲಿ ಹೆಸರುವಾಸಿಯಾಗಿದ್ದಾರೆ. ನಟಿ ಸಯ್ಯೇಶಾ ಸೈಗಲ್ ಅವರು ‘ಯುವರತ್ನ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಕಾಲಿಡುತ್ತಿದ್ದಾರೆ. ಆದರೆ ಈಗಾಗಲೇ ಸೌತ್ ಇಂಡಿಯಾದ ಹಲವು ಸಿನಿಮಾಗಳಲ್ಲಿ ನಟಿ ಸಯ್ಯೇಶಾ ಕಾಣಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *