ಡಿವೋರ್ಸ್‌ಗೆ ಮುಂದಾದ ಚಂದನ್ ಶೆಟ್ಟಿ, ನಿವೇದಿತಾ ಗೌಡ ದಂಪತಿ

ಸ್ಯಾಂಡಲ್ ವುಡ್ ಕ್ಯೂಟ್ ಕಪಲ್‌ಗಳಲ್ಲಿ ಒಂದಾದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ನಟಿ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ಗೆ ಮುಂದಾಗಿದ್ದಾರೆ. ವಿಚ್ಚೇಧನ ನೀಡುವಂತೆ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ:ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿದ್ರು- ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಸಮರ್ಥನೆ

ಬಿಗ್ ಬಾಸ್ ಮನೆಯಲ್ಲಿ ಈ ಜೋಡಿ ಪ್ರೀತಿಸಿ, ಅಲ್ಲಿಂದ ವಾಪಸ್ಸು ಬಂದ ನಂತರ ಅದ್ಧೂರಿಯಾಗಿ ಮದುವೆಯಾಗಿದ್ದರು. ಈ ಇಬ್ಬರೂ ಅನ್ಯೋನ್ಯ ಜೀವನ ನಡೆಸುತ್ತಿದ್ದರು ಎನ್ನುವುದಕ್ಕೆ ಅವರೇ ಮಾಡಿಕೊಂಡಿದ್ದ ಹಲವಾರು ರೀಲ್ಸ್ ಸಾಕ್ಷಿಯಾಗಿದ್ದವು. ಆದರೆ, ಏಕಾಏಕಿ ಇಬ್ಬರೂ ನಿನ್ನೆಯಷ್ಟೇ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಡಿವೋರ್ಸ್ ಕಾರಣ ತಿಳಿದುಕೊಂಡಿಲ್ಲ. ಆದರೆ, ಇಂದು ಇಬ್ಬರೂ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಹಾಜರಾಗಿದ್ದರು. ಇಬ್ಬರೂ ಒಪ್ಪಿಗೆಯ ಮೇರೆಗೆ ಅರ್ಜಿ ಸಲ್ಲಿಸಿದ್ದಾರೆ.