ನಟ ಚೇತನ್ ಇಂದು ಕೋರ್ಟಿಗೆ ಹಾಜರ್

Chetan

ಟ, ಸಾಮಾಜಿಕ ಹೋರಾಟಗಾರ ಚೇತನ್ ಇಂದು ಬೆಳಗ್ಗೆ 10.30ಕ್ಕೆ ಬೆಂಗಳೂರು ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಬ್ರಾಹ್ಮಣ್ಯ ಕುರಿತಾಗಿ ಅವಹೇಳನದ ಮಾತುಗಳನ್ನು ಚೇತನ್ ಆಡಿದ್ದಾರೆ ಎನ್ನುವ ಕಾರಣಕ್ಕಾಗಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಚೇತನ್ ಇಂದು ಕೋರ್ಟಿಗೆ ಹಾಜರಾಗುತ್ತಿದ್ದಾರೆ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

ಈ ಕುರಿತು ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಬೆಳಿಗ್ಗೆ 10.30ಕ್ಕೆ ನಾನು ಕಾನೂನು ಪ್ರಕ್ರಿಯೆಗಳಿಗಾಗಿ ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಲಿದ್ದೇನೆ. ಭಾರತೀಯ ನ್ಯಾಯಾಂಗ ವ್ಯವಸ್ಥೆಯು ನಮಗೆ ನ್ಯಾಯ ಒದಗಿಸುತ್ತದೆ ಎಂದು ನಂಬಿದ್ದೇನೆ. ಜೈ ಕರ್ನಾಟಕ, ಜೈ ಭೀಮ್’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪವನ್ನು ಎದುರಿಸುತ್ತಿರುವ ಚೇತನ್ ಅವರಿಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಮೂರ್ನಾಲ್ಕು ಬಾರಿ ವಿಚಾರಣೆ ಮಾಡಲಾಗಿದೆ. ಪವನ್ ಕುಮಾರ್ ಶರ್ಮಾ ಎನ್ನುವವರು ದೂರು ಕೊಟ್ಟ ಹಿನ್ನೆಲೆಯಲ್ಲಿ ವಿಚಾರಣೆ ಮಾಡಲಾಗಿತ್ತು. ಕಲಂ 153 ಬಿ, 295ಎ ಅಡಿ ಪೊಲೀಸ್ ನವರು ದೂರು ದಾಖಲಿಸಿಕೊಂಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಕೂಡ ಪೊಲೀಸ್ ಆಯುಕ್ತರಿಗೆ ದೂರ ನೀಡಿದ್ದರು.

Comments

Leave a Reply

Your email address will not be published. Required fields are marked *