`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ ಏಳು ಮಂದಿಯ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿ ಇಂದು ನಡೆಯಲಿದೆ. ನಟ ದರ್ಶನ್ ಸೇರಿ ಉಳಿದ ಆರೋಪಿಗಳ ಪರ ವಾದ ಮಂಡನೆಯಾಗಲಿದ್ದು, ಇದರ ಬೆನ್ನಲ್ಲೇ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಕೊಲೆ ಪ್ರಕರಣದಲ್ಲಿ ಹೈಕೋರ್ಟ್‍ನಿಂದ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳು ಜಾಮೀನು ಪಡೆದಿದ್ದರು. ಇದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ನಟ ದರ್ಶನ್ ಪರ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಲಿದ್ದಾರೆ. ಇದನ್ನೂ ಓದಿ: ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

ಮಂಗಳವಾರವೇ ಈ ಅರ್ಜಿ ವಿಚಾರಣೆ ಮುಗಿಯಬೇಕಿತ್ತು. ಅಂದು ಕೋರ್ಟ್ ಮುಂದೆ ಹಾಜರಾಗಿದ್ದ ವಕೀಲ ಸಿದ್ದಾರ್ಥ ದವೆ, ಪ್ರಕರಣದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಕಳೆದ ರಾತ್ರಿ ಈ ಪ್ರಕರಣ ನನಗೆ ಬಂದಿದೆ. ಇದರ ಬಗ್ಗೆ ಅಧ್ಯಯನ ಮಾಡಬೇಕಿದೆ ಸ್ವಲ್ಪ ಸಮಯ ಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ನ್ಯಾ.ಪಾರ್ದಿವಾಲ ನೇತೃತ್ವದ ದ್ವಿ ಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.

ಇದೇ ವೇಳೆ ಕೋರ್ಟ್ ಲಿಖಿತ ರೂಪದಲ್ಲಿ ದಾಖಲೆ ಸಿದ್ಧಪಡಿಸಲು ಹಾಗೂ 75% ಲಿಖಿತ ರೂಪದಲ್ಲಿ ವಾದ ಮಂಡಿಸ ಸೂಚಿಸಿತ್ತು. ಕೆಲ ಕಾಲ ಅಷ್ಟೇ ವಾದ ಮಂಡನೆಗೆ ಅವಕಾಶ ಕೊಡುವುದಾಗಿ ಪೀಠ ಹೇಳಿತ್ತು. ಇದನ್ನೂ ಓದಿ: ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು