ಕೊನೆಗೂ ‘ಮಾರ್ಟಿನ್’ ಸಿನಿಮಾದ ಬಗ್ಗೆ ಸಿಹಿಸುದ್ದಿ ಕೊಟ್ಟ ಧ್ರುವ ಸರ್ಜಾ

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಧ್ರುವ ಸಿನಿಮಾಗಾಗಿ ಕಾದು ಕುಳಿತ ಅಭಿಮಾನಿಗಳಿಗೆ ಈಗ ಬಿಗ್ ಅಪ್‌ಡೇಟ್ ಸಿಕ್ಕಿದೆ. ‘ಮಾರ್ಟಿನ್’ (Martin) ಚಿತ್ರದ ಬಗ್ಗೆ ಧ್ರುವ ಮಾಹಿತಿ ನೀಡಿದ್ದಾರೆ. ಇದನ್ನು ಓದಿ: ಶಾರುಖ್ ಖಾನ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ಎ.ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಸಿನಿಮಾದ ಶೂಟಿಂಗ್ ಮುಗಿದಿದೆ. ಈ ಚಿತ್ರಕ್ಕಾಗಿ ಕಳೆದ ಎರಡು ವರ್ಷಗಳಿಂದ ಧ್ರುವ ಬೆವರು ಹರಿಸಿದ್ದಾರೆ. ಆದರೆ ಸಿನಿಮಾದ ಬಗ್ಗೆ ಏನು ಅಪ್‌ಡೇಟ್ ಸಿಗದೇ ಇದ್ದಿದ್ದಕ್ಕೆ ಫ್ಯಾನ್ಸ್ ನಿರಾಸೆ ವ್ಯಕ್ತಪಡಿಸಿದ್ದರು.

ಪ್ಯಾನ್ ಇಂಡಿಯಾ ಸಿನಿಮಾ ‘ಮಾರ್ಟಿನ್’ ಬಗ್ಗೆ ಮೇ 24ಕ್ಕೆ ಸಿಹಿಸುದ್ದಿ ಸಿಗಲಿದೆ ಎಂದು ಸ್ವತಃ ಧ್ರುವ ಸರ್ಜಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೇಳಿದ್ದಾರೆ. ಚಿತ್ರದ ಟೀಸರ್ ಅಥವಾ ಟ್ರೈಲರ್ ರಿಲೀಸ್ ಮಾಡ್ತಾರಾ ಅಂದೇ ಸಮಯದಲ್ಲಿ ರಿಲೀಸ್ ಬಗ್ಗೆ ಮಾಹಿತಿ ಸಿಗುತ್ತಾ ಎಂದು ಕಾದುನೋಡಬೇಕಿದೆ.

‘ಮಾರ್ಟಿನ್’ ಹೀರೋ ಧ್ರುವಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಉದಯ್ ಮೆಹ್ತಾ ನಿರ್ಮಾಣ ಮಾಡಿದ್ದಾರೆ.