ತುಮಕೂರು: ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ತಮ್ಮ 45 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸಿದ್ದಗಂಗಾ ಮಠಕ್ಕೆ ಭೇಟಿಕೊಟ್ಟು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಪಿ.ಲಂಕೇಶ್ ಅವರ ಕೆಲ ಪುಸ್ತಕಗಳನ್ನು ಕೊಟ್ಟು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಮಠದ ವಿದ್ಯಾರ್ಥಿಗಳಿಗೂ ಪಿ. ಲಂಕೇಶ್ ಅವರ ಸಾಹಿತ್ಯ ಕೃತಿಗಳನ್ನು ಕೊಟ್ಟು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸಹೋದರಿ ಗೌರಿಲಂಕೇಶರನ್ನು ಈ ವೇಳೆ ನೆನಪಿಸಿಕೊಂಡರು. ಅಕ್ಕ ಇಲ್ಲದೆ ಇರುವ ಎರಡನೇ ಹುಟ್ಟುಹಬ್ಬ ಇದಾಗಿದ್ದು, ಕಳೆದ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿಲ್ಲ. ಗೌರಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತಿದ್ದೇನೆ. ನಾನು ಗೌರಿಯ ಬಗ್ಗೆ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗೌರಿ ಕೊಲೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮಾಡಿ ಇದೀಗ ಕೊಲೆಗಾರರನ್ನು ಬಂಧಿಸಲಾಗುತ್ತಿದೆ. ಕೋರ್ಟ್ ತೀರ್ಪು ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿವರೆಗೂ ನಾನು ಏನೂ ಹೇಳುವುದಿಲ್ಲ ಎಂದು ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply