ನಟ ಜಗ್ಗೇಶ್ ಮಗ ಗುರುರಾಜ್‍ಗೆ ಚಾಕು ಇರಿತ

ಬೆಂಗಳೂರು: ನಟ ಜಗ್ಗೇಶ್ ಅವರ ಮಗ ಗುರುರಾಜ್ ಅವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.

ಭಾನುವಾರ ಸಂಜೆ ಗುರುರಾಜ್‍ಗೆ ಚಾಕು ಇರಿದಿದ್ದು, ಸದ್ಯ ಗುರು ಅವರನ್ನು ಆರ್.ಟಿ.ನಗರದ ಪೂರ್ಣಿಮಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಗುರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಭಾನುವಾರ ಸಂಜೆ ತಮ್ಮ ಮಗುವನ್ನು ಶಾಲೆಯಿಂದ ಕರೆದುಕೊಂಡು ಬರುವ ವೇಳೆ ಈ ಘಟನೆ ನಡೆದಿದೆ. ಜಗ್ಗೇಶ್ ಹಾಗೂ ಗುರು ಪತ್ನಿ ಆಸ್ಪತ್ರೆಯಲ್ಲಿದ್ದಾರೆ. ದಾರಿಯಲ್ಲಿ ಹೋಗುವ ಕಿಡಿಗೇಡಿಗಳು ಹಣಕ್ಕಾಗಿ ಗುರು ಮೇಲೆ ದಾಳಿ ನಡೆಸಿ ತೊಡೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಈಗಾಗಲೇ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

ಶುಕ್ರವಾರ ತೆರೆಕಂಡ ಶಿವರಾಜ್‍ಕುಮಾರ್ ಅಭಿನಯದ ಮಾಸ್ ಲೀಡರ್ ಚಿತ್ರದಲ್ಲಿ ಗುರುರಾಜ್ ಕಾಣಿಸಿಕೊಂಡಿದ್ದಾರೆ .

https://twitter.com/OnlyShivanna/status/895309003529441283

 

 

Comments

Leave a Reply

Your email address will not be published. Required fields are marked *