ಜ್ಯೂ.ಎನ್‌ಟಿಆರ್ ಸಹೋದರ ಕಲ್ಯಾಣ್ ರಾಮ್ ಸಿನಿಮಾದ ಸೆಟ್‌ನಲ್ಲಿ ಅಗ್ನಿ ಅವಘಡ

ಜ್ಯೂ.ಎನ್‌ಟಿಆರ್ (Jr.Ntr) ಸಹೋದರ ಕಲ್ಯಾಣ್ ರಾಮ್ (Actor Kalyan Ram) ನಟಿಸುತ್ತಿದ್ದ ಸಿನಿಮಾದ ಶೂಟಿಂಗ್ ಸೆಟ್‌ಗೆ ಬೆಂಕಿ ತಗುಲಿದ್ದು, ಸುಮಾರು 4 ಕೋಟಿ ರೂ. ನಷ್ಟವಾಗಿದೆ. ಆದರೆ ಅಗ್ನಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯ ಮತ್ತು ಜೀವಹಾನಿ ಸಂಭವಿಸಿಲ್ಲ ಎಂದು ಸಿನಿಮಾ ತಂಡ ಸ್ಟಷ್ಟನೆ ನೀಡಿದೆ. ಇದನ್ನೂ ಓದಿ:ಕನ್ನಡ ಕಿರುತೆರೆಯಲ್ಲಿ ಹೊಸ ರಿಯಾಲಿಟಿ ಶೋ

ಕಲ್ಯಾಣ್ ರಾಮ್ ಅವರು ಕ್ರೈಂ ಥ್ರಿಲ್ಲರ್ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ಸಿನಿಮಾದ ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ಹಾಕಲಾಗಿತ್ತು. ಇದಕ್ಕಾಗಿ ಹೈದರಾಬಾದ್ ಹೊರವಲಯದಲ್ಲಿ ಬೇರೆ ಬೇರೆ ಸೆಟ್‌ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ರೂ. ಖರ್ಚು ಮಾಡಲಾಗಿತ್ತು. ಈಗ ಸೆಟ್ ಬೆಂಕಿಗೆ ಆಹುತಿಯಾಗಿರುವುದರಿಂದ 4 ಕೋಟಿ ರೂ. ನಷ್ಟವಾಗಿದೆ. ಬೆಂಕಿ ಬಿದ್ದಾಗ ಶೂಟಿಂಗ್‌ ನಡೆಯುತ್ತಿರಲಿಲ್ಲವಾದರಿಂದ ಯಾವುದೇ ಹಾನಿಯಾಗಿಲ್ಲ. ಇದನ್ನೂ ಓದಿ:ವಿಜಯ್ ಹುಟ್ಟುಹಬ್ಬಕ್ಕೆ ವಿಶ್ ಮಾಡದ ರಶ್ಮಿಕಾ- ಕಾರಣ ಕೇಳಿದ ಫ್ಯಾನ್ಸ್

ಈ ಚಿತ್ರದಲ್ಲಿ ಹಿರಿಯ ನಟಿ, ರಾಜಕಾರಣಿ ವಿಜಯಶಾಂತಿ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಲ್ಯಾಣ್ ರಾಮ್‌ಗೆ ನಾಯಕಿಯಾಗಿ ಸಾಯಿ ಮಂಜ್ರೇಕರ್ (Sai Manjrekar) ನಟಿಸಿದ್ದಾರೆ. ಈ ಚಿತ್ರಕ್ಕೆ ಪ್ರದೀಪ್ ಚಿಲಕೂರಿ ನಿರ್ದೇಶನ ಮಾಡುತ್ತಿದ್ದಾರೆ.