ಬಡವರ ನೆರವಿಗೆ ಧಾವಿಸಿದ ಸುದೀಪ್ ಫ್ಯಾನ್ಸ್

ಬೆಂಗಳೂರು: ಕೊರೊನಾ ವೈರಸ್ ಕಂಟಕಕ್ಕೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಅದರಲ್ಲೂ ಅಸಹಾಯಕರು, ವಿಕಲಚೇತನರು ಸೇರಿದಂತೆ ಅನೇಕರಿಗೆ ಮಂದಿ ಊಟ ಇಲ್ಲದೆ ಒದ್ದಾಡುತ್ತಿದ್ದಾರೆ. ಅಂತಹರಿಗೆ ಪೊಲೀಸರು ಸೇರಿದಂತೆ ಕೆಲವರು ಊಟ, ನೀರು ವಿತರಣೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅಭಿಮಾನಿ ಬಳಗ ಕೂಡ ಸಹಾಯ ಮಾಡಲು ಮುಂದಾಗಿದೆ.

ಸರ್ಕಾರದ ನಿಯಮವನ್ನು ಉಲ್ಲಂಘಿಸದಂತೆ ಸುದೀಪ್ ನೀಡಿದ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಕಿಚ್ಚನ ಅಭಿಮಾನಿಗಳು ತಮ್ಮ ಕೈಲಾದ ಸೇವೆಯನ್ನು ಮಾಡುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಜನರಿಗೆ ಆಹಾರವನ್ನು ವಿತರಣೆ ಮಾಡಲಾಗುತ್ತಿದೆ.

ಪೊಲೀಸರ ಸಹಯೋಗದಿಂದ ಟ್ರಸ್ಟ್ ಮೂಲಕ ಅಭಿಮಾನಿಗಳು ಪ್ಯಾಕೆಟ್‍ನಲ್ಲಿ ಆಹಾರವನ್ನು ತಂದು ಅಸಹಾಯಕರು, ವಿಕಲಚೇತನರು ಸೇರಿದಂತೆ ಅನೇಕರಿಗೆ ನೀಡುತ್ತಿದ್ದಾರೆ. ಜೊತೆಗೆ ರಸ್ತೆಯಲ್ಲಿರುವ ಶ್ವಾನಗಳಿಗೂ ಊಟ ಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ಜೆ.ಜೆ ನಗರ, ಬ್ಯಾಟರಾಯನ ಪುರ, ಗೋರಿಪಾಳ್ಯ, ಬಂಗಾರಪ್ಪ ನಗರ ಮತ್ತು ಮೈಸೂರು ರಸ್ತೆಯಲ್ಲಿರುವ ಅಸಹಾಯಕರ ಹಸಿವನ್ನು ನೀಗಿಸುತ್ತಿದ್ದಾರೆ. ಇನ್ನೂ ಮುಂದೆ ನಾಡಿನ ತುಂಬಾ ಕಿಚ್ಚನ ಅಭಿಮಾನಿ ಬಳಗ ಈ ಕಾರ್ಯವನ್ನು ಹಮ್ಮಿಕೊಳ್ಳುತ್ತಿದೆ.

Comments

Leave a Reply

Your email address will not be published. Required fields are marked *