ವರ್ಷಾಂತ್ಯದಲ್ಲಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‍ನ್ಯೂಸ್

ಬೆಂಗಳೂರು: ನಟ ಕಿಚ್ಚ ಸುದೀಪ್ 2019ರ ವರ್ಷಾಂತ್ಯದಲ್ಲಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುವ ಮೂಲಕ ಗುಡ್‍ನ್ಯೂಸ್ ಕೊಟ್ಟಿದ್ದಾರೆ.

ಕೆಲವು ದಿನಗಳಿಂದ ಸುದೀಪ್ ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸಿಕೊಂಡು ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತು ಗಾಂಧಿನಗರದಲ್ಲಿ ಕೇಳಿ ಬರುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಸುದೀಪ್ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಈ 10 ವರ್ಷದಲ್ಲಿ ಒಂದೇ ಒಂದು ದಿನವೂ ನಿಮ್ಮನ್ನ ಮರೆತಿಲ್ಲ: ಸುದೀಪ್

“ನನ್ನ ನಿರ್ದೇಶನದ ಸಿನಿಮಾ ಮತ್ತು ತಂಡದ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡುತ್ತೇನೆ. ನಾನು ಸದಾ ಏನನ್ನು ಮಾಡಲು ಇಷ್ಟಪಡುತ್ತೇನೋ, ಅದನ್ನು ಮಾಡುತ್ತಿರುವುದಕ್ಕೆ ತುಂಬಾ ಸಂತಸವಾಗುತ್ತಿದೆ. ಏಳು ವರ್ಷಗಳ ಗ್ಯಾಪ್ ಬಳಿಕ ನಾನು ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದೇನೆ. ಇದಕ್ಕೆ ನನ್ನ ಎಲ್ಲಾ ಸ್ನೇಹಿತರು ನನ್ನೊಂದಿಗಿರುತ್ತಾರೆ ಎಂಬ ಭರವಸೆ ಇದೆ. ಹೀಗಾಗಿ ನಿಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಸುದೀಪ್ ಟ್ವೀಟ್ ಮಾಡಿದ ತಕ್ಷಣ ಸಾವಿರಾರು ನೆಟ್ಟಿಗರು ಕಮೆಂಟ್ ಮಾಡುವ ಶುಭಾಶಯ ತಿಳಿಸಿದ್ದಾರೆ. ಕೆಲವರು ರೀಮೇಕ್ ಚಿತ್ರ ನಿರ್ದೇಶನ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಸುದೀಪ್ “ನಾನು ರೀಮೇಕ್ ಮಾಡುವುದನ್ನು ಬಹಳ ಹಿಂದೆಯೇ ನಿಲ್ಲಿಸಿದ್ದೇನೆ. ಹೀಗಾಗಿ ನಾನು ಈ ಬಾರಿ ನಿರ್ದೇಶನ ಮಾಡುತ್ತಿರುವ ಸಿನಿಮಾ ರೀಮೇಕ್ ಅಲ್ಲ” ಎಂದು ಟ್ವಿಟ್ಟರಿನಲ್ಲೇ ಸ್ಪಷ್ಟನೆ ಕೊಟ್ಟಿದ್ದಾರೆ.

ಸದ್ಯಕ್ಕೆ ಸುದೀಪ್ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿದ ತಕ್ಷಣ ತಮ್ಮ ನಿರ್ದೇಶನದ ಚಿತ್ರವನ್ನು ಅನೌನ್ಸ್ ಮಾಡುವ ಸಾಧ್ಯತೆ ಇದೆ.

Comments

Leave a Reply

Your email address will not be published. Required fields are marked *