ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ: ಉಗ್ರರ ದಾಳಿ ಬಗ್ಗೆ ಸುದೀಪ್ ಕಿಡಿ

ಹಲ್ಗಾಮ್‌ನಲ್ಲಿ (Pahalgam Terrorist Attack) ಹಿಂದೂಗಳ ಮೇಲೆ ನಡೆದ ಉಗ್ರರ ದಾಳಿ ಬಗ್ಗೆ ಶಿವಣ್ಣ, ಯಶ್ (Yash), ರಾಧಿಕಾ ಪಂಡಿತ್ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ನಟ ಸುದೀಪ್ ಕೂಡ ರಿಯಾಕ್ಟ್ ಮಾಡಿದ್ದಾರೆ. ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ, ಉಗ್ರರ ಹೀನ ಕೃತ್ಯಕ್ಕೆ ತಕ್ಷಣ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಸುದೀಪ್ (Sudeep) ಮನವಿ ಮಾಡಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ. ದೇಶದ ಶಕ್ತಿಯ ಮೇಲೆ ಮಾಡಲಾದ ದಾಳಿ. ಇದು ಸುಮ್ಮನಿರುವ ಸಮಯವಲ್ಲ. ಈ ಘಟನೆಗೆ ಪ್ರತಿಕ್ರಿಯೆ ಕೊಡಲೇಬೇಕು. ಈ ಹೀನ ಕೃತ್ಯದಲ್ಲಿ ಪಾಲ್ಗೊಂಡವರ ವಿರುದ್ಧ ತಕ್ಷಣ ಕ್ರಮ ವಹಿಸಿ ಅಂತಾ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್‌ಗೆ ಎಕ್ಸ್‌ನಲ್ಲಿ ಮೂಲಕ ಸುದೀಪ್ ಮಾಡಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ 27 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.