ಬೆಂಗಳೂರು: ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಕೆಪಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಈಗ ತಾವೇ ಹೊಸ ಪಕ್ಷವನ್ನು ಸ್ಥಾಪಿಸಿ ನೋಂದಣಿ ಮಾಡಿಸುತ್ತಿದ್ದಾರೆ.
ದೆಹಲಿಯ ಚುನಾವಣಾ ಕಚೇರಿಗೆ ಹೋಗಿ ತನ್ನ ಉತ್ತಮ ಪ್ರಜಾಕೀಯ ಪಕ್ಷವನ್ನು ನೋಂದಣಿ ಮಾಡಿಸಿದ್ದಾರೆ. ಅಷ್ಟೇ ಅಲ್ಲದೇ ದೆಹಲಿಯ ಚುನಾವಣಾ ಕಚೇರಿಯ ಮುಂಭಾಗ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವೀಟ್ ಮಾಡಿ ಉತ್ತಮ ಪ್ರಜಾಕೀಯ ಪಕ್ಷ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೆಪಿಜೆಪಿಗೆ ನಟ ಉಪೇಂದ್ರ ರಾಜೀನಾಮೆ – ಹೊಸ ಪಕ್ಷ ಸ್ಥಾಪನೆಗೆ ನಿರ್ಧಾರ
ಕೆಪಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮಗೂ ಕೆಪಿಜೆಪಿಗೂ ಇನ್ಮುಂದೆ ಸಂಬಂಧ ಇರಲ್ಲ. ಪ್ರಜಾಕೀಯ ಹೆಸರಲ್ಲಿ ಹೊಸ ಪಕ್ಷ ಕಟ್ಟಲು ತೀರ್ಮಾನ ಮಾಡಿದ್ದೇವೆ. ಇಂದಿನಿಂದಲೇ ಹೊಸ ಪಕ್ಷ ಸ್ಥಾಪನೆ ಕಾರ್ಯ ಆರಂಭಿಸುತ್ತೇವೆ. ಪ್ರಜಾಕೀಯದ ಸಿದ್ಧಾಂತ ಇಟ್ಟುಕೊಂಡೇ ಹೊಸ ಪಕ್ಷ ಕಟ್ಟುತ್ತೇವೆ. ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತೇವೆ. ಎಲ್ಲರೂ ಸೇರಿ ಒಮ್ಮತದ ತೀರ್ಮಾನಕ್ಕೆ ಬಂದ್ದಿದ್ದೇವೆ. ನಾನು ಹಾಗೂ ನನ್ನ ಜೊತೆ ನಾಲ್ಕೈದು ಜನ ಸೇರಿ ಎಲ್ಲರೂ ರಾಜೀನಾಮೆ ನೀಡುತ್ತಿದ್ದೇವೆ ಎಂದು ಹೇಳಿದ್ದರು.
ಪ್ರಜಾಕೀಯ ವಿಷಯವನ್ನು ಜನರಿಗೆ ತಿಳಿಸುತ್ತೇವೆ. ಅದಷ್ಟು ಬೇಗ ಪ್ರಜಾಕೀಯ ಪಕ್ಷ ಸ್ಥಾಪನೆ ಮಾಡುತ್ತೇವೆ. ಇದೇ ವಿಧಾನಸಭೆ ಚುನಾವಣೆಗೆ ಸ್ಫರ್ಧೆ ಮಾಡುತ್ತೇವೆ. ಇಲ್ಲವಾದ್ರೆ ಪಾಲಿಕೆ ಚುನಾವಣೆ ಅಥವಾ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಪ್ರಜಾಕೀಯ ಬಿಟ್ಟು ರಾಜಕೀಯ ಮಾಡಲ್ಲ ಎಂದು ಅಂದು ತಿಳಿಸಿದ್ದರು.
At Delhi for “Utthama PRAJAAKEEYA Party “registration process…, pic.twitter.com/6nFWrzpjqy
— Upendra (@nimmaupendra) April 25, 2018

Leave a Reply