ಕನ್ನಡಕ್ಕೆ ವಿಜಯ್ ದೇವರಕೊಂಡ ಎಂಟ್ರಿ – ಮತ್ತೆ ಒಂದಾದ ‘ಗೀತಾ ಗೋವಿಂದಂ’ ಜೋಡಿ

ಬೆಂಗಳೂರು: ‘ಗೀತಾ ಗೋವಿಂದಂ’ ಸಿನಿಮಾದ ಮೂಲಕ ಖ್ಯಾತಿ ಪಡೆದಿದ್ದ ನಟ ವಿಜಯ್ ದೇವರಕೊಂಡ ಅವರು ಈಗ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಗೀತಾ ಗೋವಿಂದಂ ಸಿನಿಮಾದಲ್ಲಿ ಮೋಡಿ ಮಾಡಿದ್ದ ಚೆಲುವೆ ರಶ್ಮಿಕಾ ಮತ್ತು ವಿಜಯ್ ಜೋಡಿ ಮತ್ತೆ ಒಟ್ಟಿಗೆ ಅಭಿನಯಿಸುತ್ತಿದ್ದಾರೆ.

ಹೌದು..ಅರ್ಜುನ್ ರೆಡ್ಡಿ ಮತ್ತು ಗೀತಾ ಗೋವಿಂದಂ ಸಿನಿಮಾಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ದೇವರಕೊಂಡ ಈಗ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ವಿಜಯ್ ನಟನೆಯ ‘ಡಿಯರ್ ಕಾಮ್ರೇಡ್’ ಸಿನಿಮಾ ಈಗ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಮೂಲಕ ವಿಜಯ್ ಸ್ಯಾಂಡಲ್‍ವುಡ್‍ಗೆ ಪ್ರವೇಶ ಮಾಡುತ್ತಿದ್ದಾರೆ.

‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ಅಭಿನಯಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನ ಗಟ್ಟಿಯಾಗಿ ಅಪ್ಪಿಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಇವರಿಬ್ಬರು ಈ ಹಿಂದೆ ಅಭಿನಯಿಸಿದ್ದ ಸಿನಿಮಾದಲ್ಲಿಯೂ ರಶ್ಮಿಕಾ ಮತ್ತು ವಿಜಯ್ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು.

‘ಗೀತಾ ಗೋವಿಂದಂ’ ಸಿನಿಮಾದ ಮೂಲಕ ನಟಿ ರಶ್ಮಿಕಾ ಮತ್ತು ನಟ ವಿಜಯ್ ಖ್ಯಾತಿ ಪಡೆದಿದ್ದಾರೆ. ‘ಡಿಯರ್ ಕಾಮ್ರೇಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಮಾತ್ರವಲ್ಲದೆ, ತಮಿಳು, ಮಲಯಾಳಂ ಭಾಷೆಯಲ್ಲೂ ಏಕಕಾಲಕ್ಕೆ ತೆರೆ ಕಾಣುತ್ತಿದೆ. ಒಟ್ಟು ನಾಲ್ಕು ಭಾಷೆಯಲ್ಲೂ ಸಿನಿಮಾ ಬಿಡುಗಡೆಯಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *