ಸಮಂತಾ ಹುಟ್ಟುಹಬ್ಬಕ್ಕೆ ವಿಜಯ್ ದೇವರಕೊಂಡ ಲವ್ಲಿ ವಿಶ್

ಟಾಲಿವುಡ್ ನಟಿ ಸಮಂತಾ (Samantha) ತಮ್ಮ ಹುಟ್ಟುಹಬ್ಬದ ಸೆಲೆಬ್ರೇಶನ್ ಮೂಡ್‌ನಲ್ಲಿದ್ದಾರೆ. ತೆಲುಗಿನ ಆ್ಯಪಲ್ ಬ್ಯೂಟಿ ಸ್ಯಾಮ್‌ಗೆ ಹಲವು ನಟ-ನಟಿಯರು ಬರ್ತ್‌ಡೇಗೆ ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ವಿಜಯ್ ದೇವರಕೊಂಡ (Vijay Devarakonda) ತಮ್ಮ ಸಹ ನಟಿ ಸಮಂತಾಗೆ ಸ್ವೀಟ್ ಆಗಿ ವಿಶ್ ಮಾಡಿದ್ದಾರೆ.

ಹ್ಯಾಪಿ ಬರ್ತ್‌ಡೇ ಸಾಮಿ, ಸದಾ ಖುಷಿಯಾಗಿರಿ ಮತ್ತು ಆರೋಗ್ಯವಾಗಿರಿ ಎಂದು ವಿಜಯ್ ವಿಶೇಷವಾಗಿ ನಟಿಗೆ ಶುಭಕೋರಿದ್ದಾರೆ. ‘ಖುಷಿ’ ಸಿನಿಮಾ ಪ್ರೀ- ರಿಲೀಸ್ ಕಾರ್ಯಕ್ರಮದಲ್ಲಿ ಸಮಂತಾ ಜೊತೆ ಆತ್ಮೀಯವಾಗಿದ್ದ ಫೋಟೋಗಳನ್ನು ಶೇರ್‌ ಮಾಡಿ ಶುಭಹಾರೈಸಿದ್ದಾರೆ. ವಿಜಯ್ ಪೋಸ್ಟ್‌ಗೆ ಸ್ಯಾಮ್ ಕೂಡ ರಿಯಾಕ್ಟ್ ಮಾಡಿ, ಧನ್ಯವಾದ ತಿಳಿಸಿದ್ದಾರೆ.

ಅಂದಹಾಗೆ, ವಿವಾದ, ಅನಾರೋಗ್ಯ, ಯಶಸ್ಸು ಎಲ್ಲವೂ ಅನುಭವಿಸಿರುವ ಜೀವ ಸಮಂತಾ. ನಾಗಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಮಂತಾ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಎಲ್ಲಾ ವಿಚಾರಕ್ಕೂ ಸಮಂತಾ ಕಡೆಯೇ ಬೆಟ್ಟು ಮಾಡಿ ತೋರಿಸುತ್ತಿದ್ದರು. ಸಹವಾಸವೇ ಬೇಡ ಅಂತ ವೃತ್ತಿರಂಗದಲ್ಲಿ ಬ್ಯುಸಿಯಾದರು. ‘ಪುಷ್ಪ’ ಚಿತ್ರದಲ್ಲಿ ಸೊಂಟ ಬಳುಕಿಸಿದ ಮೇಲೆ ಸಮಂತಾ ಲಕ್ ಬದಲಾಯ್ತು. ಇದನ್ನೂ ಓದಿ:ಪರಭಾಷೆಯಲ್ಲಿ ಕನ್ನಡತಿ ರುಕ್ಮಿಣಿ ವಸಂತ್‌ಗೆ ಭಾರೀ ಬೇಡಿಕೆ

ಆದರೆ ಯಶೋದ ಮತ್ತು ಖುಷಿ ಸಿನಿಮಾ ಆದ್ಮೇಲೆ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿರಲಿಲ್ಲ. ಎರಡೂ ಹೀನಾಯವಾಗಿ ಸೋತ ಚಿತ್ರಗಳು. ಸೋಲಿನ ಹೊಡೆತಕ್ಕೆ ಅನಾರೋಗ್ಯದ ಆಘಾತ ಎರಡನ್ನೂ ಸಹಿಕೊಳ್ಳೋಕೆ ಸ್ಯಾಮ್‌ಗೆ 8 ತಿಂಗಳು ಹಿಡಿಯಿತು. ಇದೀಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ವರುಣ್ ಧವನ್‌ಗೆ ನಾಯಕಿಯಾಗಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಹನಿ ಬನಿ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.