ನಟಿ ಅನಿತಾ ಭಟ್ ಸಹೋದರ ನಿಧನ

ಸ್ಯಾಂಡಲ್‌ವುಡ್ (Sandalwood) ನಟಿ ಅನಿತಾ ಭಟ್ (Anita Bhat) ಸಹೋದರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ಕುರಿತು ನಟಿಯೇ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಸಹೋದರನ ಸಾವಿನ ನೋವಿನ ಬಗ್ಗೆ ನಟಿ ಭಾವುಕರಾಗಿದ್ದಾರೆ. ಈ ಪೋಸ್ಟ್ ಸದ್ಯ ಸದ್ದು ಮಾಡ್ತಿದೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆಗಿನ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ದಿವ್ಯಾ ಸುರೇಶ್

ಸೈಕೋ, ಕನ್ನೇರಿ, ಬೆಂಗಳೂರು 69 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನಿತಾ ಭಟ್ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ನಟಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ನನ್ನ ಹೃದಯ ತುಂಡಾಗಿದೆ. ನನ್ನ ಸಹೋದರ ಹೃದಯ ಸ್ತಂಭನದಿಂದ (Cardiac Arrest) ನಮ್ಮನ್ನು ಅಗಲಿದ್ದಾರೆ. ನಾವು ಅನುಭವಿಸುತ್ತಿರುವ ನೋವು ಯಾವುದೇ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನಾನು ಒಪ್ಪಿಕೊಳ್ಳಬೇಕಾದ ಕಹಿ ಸತ್ಯವೆಂದರೆ ಅವನು ಎಂದಿಗೂ ಹಿಂತಿರುಗುವುದಿಲ್ಲ. ಆತನಿಗೆ ಸದ್ಗತಿ ಸಿಗುವಂತೆ ಅನುಗ್ರಹಿಸಿ. ಈಗ ನಿಮ್ಮ ಆಶೀರ್ವಾದ ಬೇಕು ಎಂದು ನಟಿ ಬರೆದುಕೊಂಡಿದ್ದಾರೆ. ನಟಿಯ ಪೋಸ್ಟ್‌ಗೆ ಅಭಿಮಾನಿಗಳು, ಆಪ್ತರು, ಚಿತ್ರರಂಗದ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.