12 ವರ್ಷದ ದಾಂಪತ್ಯಕ್ಕೆ ಬ್ರೇಕ್ ಹಾಕಿದ್ಯಾಕೆ? ಡಿವೋರ್ಸ್ ಬಗ್ಗೆ ಬಾಯ್ಬಿಟ್ಟ ಅನುಪ್ರಭಾಕರ್

ಸ್ಯಾಂಡಲ್‌ವುಡ್‌ನ (Sandalwood) ಪ್ರತಿಭಾನ್ವಿತ ನಟಿ ಅನುಪ್ರಭಾಕರ್ (Anuprabhakar) ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. `ಹೃದಯ ಹೃದಯ’ (Hrudaya Hrudaya) ಚಿತ್ರದ ಮೂಲ ಶಿವಣ್ಣನಿಗೆ ನಾಯಕಿಯಾದರು. ಕೆರಿಯರ್ ಪೀಕ್‌ನಲ್ಲಿರುವಾಗಲೇ ಹಿರಿಯ ನಟಿ ಜಯಂತಿ (Jayanthi) ಅವರ ಮಗ ಕೃಷ್ಣ ಕುಮಾರ್ ಜೊತೆ ಅನು ಹಸೆಮಣೆ ಏರಿದ್ದರು. 12 ವರ್ಷಗಳ ದಾಂಪತ್ಯಕ್ಕೆ ಡಿವೋರ್ಸ್ (Divorce) ತೆಗೆದುಕೊಳ್ಳುವ ಮೂಲಕ ಅಂತ್ಯವಾಗಿದ್ದೇಕೆ ಎಂಬುದರ ಬಗ್ಗೆ ಈಗ ನಟಿ ಅನುಪ್ರಭಾಕರ್ ಇದೀಗ ಮೌನ ಮುರಿದಿದ್ದಾರೆ. ಮೊದಲ ಮದುವೆ ಬಗ್ಗೆ ಮೊದಲ ಬಾರಿಗೆ ನಟಿ ಮಾತನಾಡಿದ್ದಾರೆ.

ಕನ್ನಡ, ಇಂಗ್ಲೀಷ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ಅನುಪ್ರಭಾಕರ್ (Anuprabhakar) ಅವರು ನಟಿ ಜಯಂತಿ ಜೊತೆಗಿನ ಒಡನಾಟದ ಬಗ್ಗೆ ಮತ್ತು ಮೊದಲ ಪತಿ ಜೊತೆಗಿನ ಡಿವೋರ್ಸ್ ಬಗ್ಗೆ ಮೊದಲ ಬಾರಿಗೆ ನಟಿ  ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಡಿವೋರ್ಸ್ ನಂತರ ವಾಪನ್ ನಾನು, ನನ್ನ ತಾಯಿ ಮನೆಗೆ ಬಂದೆ. ನನ್ನ ಬಗ್ಗೆ ಹುಡುಕಿದರೆ ಬರುವ ಮೊದಲ ವಿಚಾರವೇ ನನ್ನ ಡಿವೋರ್ಸ್. ನೆಗೆಟಿವ್ ಕಾಮೆಂಟ್ ನಮ್ಮ ಜೀವನದ ಒಂದು ಭಾಗ. ಅದನ್ನು ಸ್ವೀಕರಿಸಿ, ಮುಂದೆ ಸಾಗಿಸಬೇಕು. ಮದುವೆ ಆದ್ಮೇಲೆ ನಾನು ಕೆಲಸ ನಿಲ್ಲಿಸಬಾರದೆಂದು ಎಂದು ಜಯಂತಿ ಅಮ್ಮನವರು ಹೇಳಿದ್ದರು. ಮದುವೆ ಆದ ವರ್ಷವೇ 9 ಸಿನಿಮಾಗಳಲ್ಲಿ ನಟಿಸಿದೆ. ಮೊದಲಿನಿಂದಲೂ ಡ್ರೆಸ್ ತುಂಬಾ ಸಿಂಪಲ್ ಹಾಕಿಕೊಳ್ಳುವುದು. ಗ್ರ‍್ಯಾಂಡ್ ಆಗಿ ರೆಡಿ ಆಗಬೇಕು ಅಂತ ಅವರೇ ಸಲಹೆ ಕೊಡುತ್ತಿದ್ದರು. ಮೊದಲ ಮದುವೆಯಲ್ಲಿ ಏನಾಯ್ತು, ಯಾಕಾಯ್ತು ಎನ್ನುವ ವಿಚಾರವನ್ನು ನಾನು ಮಾತನಾಡುವುದಿಲ್ಲ ಎಂದು ಅನು ಹೇಳಿದ್ದಾರೆ. ಇದನ್ನೂ ಓದಿ: ರಂಜಾನ್ ಬರ್ತಿದೆ ಪತಿ ಆದಿಲ್ ರಿಲೀಸ್ ಮಾಡಿ : ಕಣ್ಣೀರಿಟ್ಟ ನಟಿ ರಾಖಿ

ನಾನಲ್ಲದೆ ನಮ್ಮ ದಾಂಪತ್ಯ ಜೀವನದಲ್ಲಿ ಮತ್ತೊಬ್ಬ ವ್ಯಕ್ತಿ ಪ್ರವೇಶ ಮಾಡಿದ್ದರಾ ಅನ್ನೋ ಪ್ರಶ್ನೆಗಳೆಲ್ಲ ತೀರಾ ನನ್ನ ಪರ್ಸನಲ್ ವಿಚಾರ. ಹೀಗಾಗಿ ನಾನು ಮಾತನಾಡಬಾರದೆಂದು ತೀರ್ಮಾನ ಮಾಡಿರುವೆ. ಇಬ್ಬರೂ ವ್ಯಕ್ತಿಗಳ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೂ ಅದು ಆ ರೂಮ್‌ನ ನಾಲ್ಕು ಗೋಡೆಗಳ ನಡುವೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿರುವುದಿಲ್ಲ. ನನ್ನ ತಂದೆ, ತಾಯಿ ಅವರ ತಂದೆ ತಾಯಿಗೂ ಕರೆಕ್ಟ್ ಆಗಿ ಯಾವ ವಿಚಾರವೂ ಗೊತ್ತಿರುವುದಿಲ್ಲ ಇದೆಲ್ಲಾ ತುಂಬಾ ಪರ್ಸನಲ್ ವಿಚಾರ. ಮುಖ್ಯವಾಗಿ ಏನು ಹೇಳಬೇಕು ಅಂದ್ರೆ ಮನುಷ್ಯನಿಗೆ ಇರೋದು ಒಂದೇ ಜೀವನ. ಆ ಜೀವನವನ್ನು ಸಂತೋಷದಿಂದ ಬಾಳಬೇಕು. ಖುಷಿಯಾಗಿ ಬದುಕಬೇಕು. ನೋವಿನಲ್ಲಿಯೇ ಜೀವನ ಸಾಗಿಸುವಂತೆ ಆಗಬಾರದು. ನಾವಿಬ್ಬರೂ ಒಟ್ಟಿಗೆ ಇರಲು ಆಗುವುದಿಲ್ಲ. ಸಂತೋಷ ಅಸಾಧ್ಯವೆಂದೆನಿಸಿದಾಗ ನೋವು ಕೊಡುವ ನಿರ್ಧಾರಗಳಾದರೂ ಸರಿ, ತೆಗೆದುಕೊಳ್ಳಬೇಕಾಗುತ್ತದೆ. ಆದರಿಂದ ಮುಂದೆ ಆಗಿದ್ದೆಲ್ಲವೂ ಆಯಿತು ಎಂದಿದ್ದಾರೆ.

ಒಂದು ಮುಖ್ಯವಾದ ಮಾತು ಹೇಳಬೇಕು. ನಿಮ್ಮ ಮನೆ ಹೆಣ್ಣು ಮಕ್ಕಳು ಕಣ್ಣೀರು ಹಾಕಿಕೊಂಡು, ಗಂಡನ ಮನೆಯಲ್ಲಿ ನೋವಾಗುತ್ತಿದೆ. ಜೀವನ ಸಾಗಿಸಲು ಆಗುತ್ತಿಲ್ಲ ಎಂದರೆ, ತಂದೆ ತಾಯಿಯಾಗಿ ಆವರನ್ನು ದಯವಿಟ್ಟು ಸಪೋರ್ಟ್ ಮಾಡಿ. ನಾನು ಆ ಘಟನೆ ಬಗ್ಗೆ ಯೋಚಿಸಿದಾಗ, ನನ್ನ ತಾಯಿ ಅಣ್ಣ ಮತ್ತು ಸ್ಕೂಲ್ ಫ್ರೆಂಡ್ಸ್ ನನ್ನ ಪರ ನಿಂತುಕೊಂಡರು. ಆಗ ನನ್ನ ತಂದೆ ಇರಲಿಲ್ಲ. ಈ ರೀತಿ ಘಟನೆ ಹೆಣ್ಣು ಮಕ್ಕಳ ಜೀವನದಲ್ಲಿ ನಡೆದರೆ, ಕುಗ್ಗುತ್ತಾರೆ. ಫ್ಯಾಮಿಲಿ ಸಪೋರ್ಟ್ ಇದ್ದಿದ್ದರಿಂದ ನನಗೆ ಮತ್ತೊಂದು ಲೈಫ್ ಕ್ರಿಯೇಟ್ ಮಾಡಿಕೊಳ್ಳಲು ಸಾಧ್ಯವಾಯ್ತು. ಸಮಾಜದಲ್ಲಿ ಯಾರೂ ಯಾರಿಗೂ ಸಪೋರ್ಟ್ ಮಾಡುವುದಿಲ್ಲ. ಕೊನೆಗೆ ನಮ್ಮ ಪರ ನಿಲ್ಲುವುದು ತಂದೆ- ತಾಯಿ ಮಾತ್ರ. ಡಿವೋರ್ಸ್ ಪರಿಹಾರ ಎಂದು ನಾನು ಹೇಳುವುದಿಲ್ಲ. ಸರಿ ಮಾಡಿಕೊಳ್ಳಿ, ಇಲ್ಲ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಿ. ಕೋಟಿ ಖರ್ಚು ಮಾಡಿ ಮಗಳ ಮದುವೆ ಮಾಡುತ್ತಾರೆ. ಅಲ್ಲಿ ವರದಕ್ಷಿಣಿಗಾಗಿ ಅವಳ ಪ್ರಾಣ ತೆಗೆದರೆ, ನೀವು ಆಮೇಲೆ ಮಾತನಾಡಿ ಏನು ಉಪಯೋಗ ಎಂದು ಅನು ಪೋಷಕರಿಗೆ ಕಿವಿ ಮಾತು ಹೇಳಿದ್ದಾರೆ.

ನಟಿ ಅನುಪ್ರಭಾಕರ್ ಅವರು 2016ರಲ್ಲಿ ನಟ ರಘು ಮುಖರ್ಜಿ (Raghu Mukherjee) ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಈಗ ದಂಪತಿಗೆ ನಂದನಾ ಎಂಬ ಮುದ್ದಾದ ಮಗಳಿದ್ದಾಳೆ. ಇಬ್ಬರೂ ಖುಷಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಚಿತ್ರರಂಗದಲ್ಲೂ ಆಕ್ಟೀವ್ ಆಗಿದ್ದಾರೆ.

Comments

Leave a Reply

Your email address will not be published. Required fields are marked *