ಜೀವನ ಸಂಗಾತಿಯನ್ನು ಪರಿಚಯಿಸಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ರಂಜನಿ ರಾಘವನ್

ನ್ನಡತಿ ಸೀರಿಯಲ್ ಖ್ಯಾತಿಯ ರಂಜನಿ ರಾಘವನ್ (Ranjani Raghavan) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜೀವನ ಸಂಗಾತಿಯನ್ನು ನಟಿ ಪರಿಚಯಿಸಿದ್ದಾರೆ. ಇದನ್ನೂ ಓದಿ:‘ವಿಕ್ರಾಂತ್‌ ರೋಣ’ ನಿರ್ದೇಶಕನ ಜೊತೆ ಕೈಜೋಡಿಸಿದ ಕಿಚ್ಚ- ಸೆ.2ರಂದು ಸಿಗಲಿದೆ ಅಪ್‌ಡೇಟ್‌

ಮತ್ತೊಬ್ಬ ನಟಿ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಸಾಗರ್ ಭಾರಧ್ವಜ್ (Sagar Bharadwaj) ಎಂಬುವವರ ಜೊತೆ‌ ರಂಜನಿ ರಾಘವನ್ ಎಂಗೇಜ್ ಆಗಿದ್ದಾರೆ. ಜೀವನ ಸಂಗಾತಿ, ನನ್ನ ಹುಡುಗ ಎಂದು ಹ್ಯಾಶ್ ಟ್ಯಾಗ್ ಕೊಟ್ಟು ಫೋಟೋ ಶೇರ್ ಮಾಡಿ ನಟಿ ಸಂಭ್ರಮಿಸಿದ್ದಾರೆ.

ಅಂತೂ ಇಂತೂ ನಟಿ ಬಾಯ್‌ಫ್ರೆಂಡ್ ಪರಿಚಯ ಮಾಡಿಕೊಟ್ಟಿದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇಬ್ಬರಿಗೂ ಶುಭಕೋರುತ್ತಿದ್ದಾರೆ. ಮದುವೆ ಯಾವಾಗ? ಎಂಬ ವಿವರ ಇನ್ನಷ್ಟೇ ರಿವೀಲ್‌ ಆಗಬೇಕಿದೆ.

ಅಂದಹಾಗೆ, ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್, ಕಾಂಗರೂ ಸಿನಿಮಾ, ರಾಜಹಂಸ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.