ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

– ಡಿವೋರ್ಸ್ ಬಳಿಕ ಜನಿಸಿದವಳು ಶ್ರೀಲೀಲಾ

ಹೈದರಾಬಾದ್: ಸ್ಯಾಂಡಲ್‍ವುಡ್ ನಟಿ ಶ್ರೀಲೀಲಾ ಕನ್ನಡದಲ್ಲಿ ಕಿಸ್ ಮೂಲಕ ಖ್ಯಾತಿಗಳಿಸಿ ಬಳಿಕ ಈಗ ತೆಲುಗು ಚಿತ್ರರಂಗಕ್ಕೂ ಪದಾರ್ಪಣೆ ಮಾಡಿ ಮಿಂಚುತ್ತಿದ್ದಾರೆ. ಈ ನಡುವೆ ಅವರ ವೈಯಕ್ತಿಕ ಜೀವನದ ಕುರಿತಂತೆ ಸುದ್ದಿಯಲ್ಲಿದ್ದಾರೆ.

ಒಳ್ಳೆಯ ಪಾತ್ರಗಳನ್ನು ಮಾಡುತ್ತಾ ಗುರುತಿಸಿಕೊಳ್ಳುತ್ತಿರುವ ನಟಿ ಇದೀಗ ವೈಯಕ್ತಿಕ ವಿಚಾರವಾಗಿ ಭಾರೀ ಸುದ್ದಿಯಲ್ಲಿದ್ದಾರೆ. ಶ್ರೀಲೀಲಾ ಖ್ಯಾತ ಉದ್ಯಮಿ ಸುರಪನೇನಿ ಸುಭಾಕರ ರಾವ್ ಅವರ ಮಗಳು ಎಂದು ಹೇಳಿಕೊಂಡಿದ್ದರು. ಆದರೆ ಈ ವಿಚಾರವಾಗಿ ಸುಭಾಕರ್ ಅವರು ನೀಡಿರುವ ಸ್ಪಷ್ಟನೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.

ಈ ಬಗ್ಗೆ ತೆಲುಗು ವಾಹಿನಿಯೊಂದರ ಜೊತೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ ಸುಭಾಕರ ರಾವ್‌, ಶ್ರೀಲೀಲಾ ನನ್ನ ಮಗಳು ಅಲ್ಲ, ನನ್ನ ಪತ್ನಿಯ ಜೊತೆ ಡಿವೋರ್ಸ್ ಆದ ಬಳಿಕ ಶ್ರೀಲೀಲಾ ಜನಿಸಿದ್ದಾಳೆ. ನಾನು ನನ್ನ ಪತ್ನಿ 20 ವರ್ಷದಿಂದ ಬೇರೆಯಾಗಿದ್ದೇವೆ. ಡಿವೋರ್ಸ್ ಕೇಸ್ ಇನ್ನೂ ಕೋರ್ಟ್‍ನಲ್ಲಿ ಬಾಕಿ ಇದೆ. ನಾನು ಅವಳ ತಂದೆಯಲ್ಲ. ಶ್ರೀಲೀಲಾ ಮಾಧ್ಯಮಗಳ ಸಂದರ್ಶನದಲ್ಲಿ ನನ್ನ ಹೆಸರು ಬಳಸುತ್ತಿದ್ದಾರೆ. ನನ್ನ ಆಸ್ತಿಯಲ್ಲಿ ಪಾಲು ಕೇಳಲೆಂದು ನನ್ನ ಹೆಸರು ಬಳಕೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ನಾನು ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರೆ.

ಕಿಸ್, ಭರಾಟೆ ಕನ್ನಡ ಸಿನಿಮಾಗಳ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರು ಅಭಿನಯಿಸಿರುವ ತೆಲುಗು ಸಿನಿಮಾ ಪೆಳ್ಳಿ ಸಂದಡಿ ಸಿನಿಮಾ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಒಳ್ಳೆಯ ಪ್ರದರ್ಶನವನ್ನು ಕಾಣುತ್ತಿದೆ. ಶ್ರೀಲೀಲಾ ಅವರ ಡಾನ್ಸ್, ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ ಇದೀಗ ಹೊಸದೊಂದು ಸುಳಿಗೆ ಸಿಲುಕಿಕೊಂಡು ಸುದ್ದಿಯಾಗಿದ್ದಾರೆ.

ಶ್ರೀಲೀಲಾ ಯು.ಎಸ್‍.ನಲ್ಲಿ ಜನಿಸಿದರು, ನಂತರ ತಾಯಿ ಜೊತೆಗೆ ಬೆಂಗಳೂರಿನಲ್ಲಿ ನೆಲೆಸಿದರು. ಈಕೆಯ ತಾಯಿ ಡಾ.ಸ್ವರ್ಣಲತಾ ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಶ್ರೀಲೀಲಾ ಮಾಡೆಲಿಂಗ್ ಮತ್ತು ರಾಂಪ್ ವಾಕ್‍ನಲ್ಲಿ ತೊಡಗಿಸಿಕೊಂಡಿದ್ದರು. 2019 ರಲ್ಲಿ ಎಪಿ ಅರ್ಜುನ್ ಅವರ ರೋಮ್ಯಾಂಟಿಕ್ ಎಂಟರ್‌ಟೇನರ್ ಸಿನಿಮಾವಾಗಿರುವ ಕಿಸ್ ಸಿನಿಮಾ ಮೂಲಕವಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಭರಾಟೆ ಸಿನಿಮಾದಲ್ಲಿ ನಟಿಸಿ ಮನೆ ಮಾತಾಗಿದ್ದಾರೆ.

Comments

Leave a Reply

Your email address will not be published. Required fields are marked *