ಕಾಬೂಲ್‍ನಲ್ಲಿ ಮತ್ತೊಂದು ಪ್ರಬಲ ಬಾಂಬ್ ಸ್ಫೋಟ

ಕಾಬೂಲ್: ರಕ್ತಪಿಪಾಸುಗಳ ಕೈಗೆ ಸಿಲುಕಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮತ್ತೊಂದು ಪ್ರಬಲ ಬಾಂಬ್ ಸ್ಫೋಟಗೊಂಡಿದೆ. ಇತ್ತ ಕಾಬೂಲ್ ವಿಮಾನ ನಿಲ್ದಾಣದ ಬಳಿಯೂ ರಾಕೆಟ್ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಇದುವರೆಗೂ ಈ ದಾಳಿಯ ಹೊಣೆಯನ್ನು ಯಾವ ಸಂಘಟನೆಗಳು ಹೊತ್ತುಕೊಂಡಿಲ್ಲ. ಬಾಂಬ್ ಸ್ಫೋಟದ ಬಳಿಕದ ಕೆಲ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಬಾಂಬ್ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದ್ದು, ಆದ್ರೆ ಈ ಬಗ್ಗೆ ಅಧಿಕೃತವಾಗಿ ದೃಢಪಟ್ಟಿಲ್ಲ. ಗುರುವಾರ ನಡೆದ ಬಾಂಬ್ ಸ್ಫೋಟದಲ್ಲಿ 13 ಅಮೆರಿಕ ಸೈನಿಕರು ಸೇರಿದಂತೆ 170 ಜನರು ಪ್ರಾಣ ಕಳೆದುಕೊಂಡಿದ್ದರು.

ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ, ಕಾಬೂಲ್ ಏರ್ ಪೋರ್ಟ್ ರಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲ ಆತಂಕಗಳ ನಡುವೆಯೂ ನಮ್ಮ ಸೈನಿಕರು ಸಂತ್ರಸ್ತರನ್ನು ಏರ್ ಲಿಫ್ಟ್ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ಈ ಕಾರ್ಯಾಚರಣೆ ಮುಂದಿನ ದಿನಗಳು ಅಪಾಯಕಾರಿಯಾಗಿರಲಿವೆ ಎಂದು ಎಚ್ಚರಿಕೆ ನೀಡಿದ್ದರು. ಇತ್ತ ಅಮೆರಿಕ ಅಧ್ಯಕ್ಷ ಜೋ ಬೈಡನ್ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

ಗುರುವಾರ ಬಾಂಬ್ ದಾಳಿ ಬಳಿಕ ದೇಶ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ತಾಲಿಬಾನಿಗಳನ್ನು ವಿಮಾನ ನಿಲ್ದಾಣದ ಸಮೀಪ ಮತ್ತು ಸಂಪರ್ಕಿಸುವ ಕಲ್ಪಿಸುವ ಮಾರ್ಗಗಳಲ್ಲಿ ಜನರನ್ನು ನೇಮಿಸಿದೆ. ಇತ್ತ ಬ್ರಿಟನ್, ಜರ್ಮನಿ ಸೇರಿದಂತೆ ಹಲವು ದೇಶಗಳು ಏರ್ ಲಿಫ್ಟ್ ಮಾಡೋದನ್ನ ಸ್ಥಗಿತಗೊಳಿಸಿವೆ. ಇತ್ತ ಆಗಸ್ಟ್ 31ರೊಳಗೆ ರಕ್ಷಣಾ ಕಾರ್ಯ ಪೂರ್ಣವಾಗದಿದ್ರೆ ನಮ್ಮ ಕಾರ್ಯಚರಣೆ ಮುಂದುವರಿಯಲಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಆಗಸ್ಟ್ 31ರೊಳಗೆ ತಮ್ಮ ಸೇನೆಯನ್ನು ಹಿಂಪಡೆಯುವಂತೆ ಅಮೆರಿಕಾಗೆ ತಾಲಿಬಾನಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

Comments

Leave a Reply

Your email address will not be published. Required fields are marked *