ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ FIR

-ತುಮಕೂರಿನಲ್ಲಿ 71ನೇ ಕೇಸ್‌ ದಾಖಲಾಗಬಹುದು ಎಂದಿದ್ದ ಯತ್ನಾಳ್‌

ತುಮಕೂರು: ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿಗೆ ಮದ್ದೂರಿಗೆ (Maddur) ಭೇಟಿ ನೀಡಿದ್ದಾಗ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿಯೇ ಪ್ರಕರಣವೊಂದು ದಾಖಲಾಗಿತ್ತು. ಅದಾದ ಬೆನ್ನಲ್ಲೇ ಇದೀಗ ತುಮಕೂರಿನಲ್ಲಿ (Tumakuru) ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ.ಇದನ್ನೂ ಓದಿ: ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಶನಿವಾರ (ಸೆ.13) ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ, ಅನ್ಯಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪೊಲೀಸ್ ಸಿಬ್ಬಂದಿ ರಘುನಾಥ್ ಎಂಬುವವರು ದೂರು ನೀಡಿದ್ದು, ದೂರಿನನ್ವಯ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್ ದಾಖಲಾಗುವ ಮುನ್ನ ತುಮಕೂರು ಶೋಭಾಯಾತ್ರೆಯಲ್ಲಿ ಭಾಷಣ ಮಾಡಿದ್ದ ಯತ್ನಾಳ್, ನನ್ನ ವಿರುದ್ಧ ಮದ್ದೂರಿನಲ್ಲಿ 70ನೇ ಪ್ರಕರಣ ದಾಖಲಾಗಿದೆ. ಇದೀಗ ತುಮಕೂರಿನಲ್ಲಿ 71ನೇ ಪ್ರಕರಣ ದಾಖಲಾಗಬಹುದು ಎಂದು ಹೇಳಿದ್ದರು ಎನ್ನಲಾಗಿದೆ.

ಕಳೆದ ಗುರುವಾರ (ಸೆ.11) ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಅದರಂತೆ ಮದ್ದೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್‌ನ ಅಂತ್ಯ ಮದ್ದೂರಿನಿಂದ್ಲೆ ಪ್ರಾರಂಭ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳೇ ಸಾಕ್ಷಿ – ಯತ್ನಾಳ್ ಕಿಡಿ