ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

ನವದೆಹಲಿ: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದ ಪೈಲಟ್‌ 8,200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತಿಳಿಸಿದೆ.

ಅಹಮದಾಬಾದ್‌ನಲ್ಲಿ ಲಂಡನ್‌ಗೆ ಹೊರಟ್ಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದ ಪತನಗೊಂಡ ಬೆನ್ನಲ್ಲೇ ಡಿಜಿಸಿಎ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಹೇಳಿಕೆಯಲ್ಲಿ ಏನಿದೆ?
ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.39ಕ್ಕೆ ಟೇಕಾಫ್‌ ಆಗಿದೆ. ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಸುತ್ತಿದ್ದರು.

ಪೈಲಟ್‌ ಕ್ಯಾಪ್ಟನ್ ಸುಮೀತ್ ಸಭರ್ವಾಲ್ 8,200 ಗಂಟೆಗಳ ಅನುಭವ ಹೊಂದಿದ್ದರೆ ಸಹ-ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಕರೆ ಬಂದಿದೆ. ನಂತರ ಎಟಿಸಿ ಮಾಡಿದ ಕರೆಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.