ಬೆಂಗಳೂರು: ಜಾರಕಿಹೊಳಿ ಸಹೋದರರ ಆಂತರಿಕ ಬಿಕ್ಕಟ್ಟು ದೆಹಲಿಯ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಧಾನ ನಡೆಸಲು ರಾಜ್ಯ ಕೈ ನಾಯಕರು ಮುಂದಾಗಿದ್ದಾರೆ.
ಹೌದು, ಕಾಂಗ್ರೆಸ್ಸಿನ ಆಂತರಿಕ ಬಿಕ್ಕಟ್ಟು ಹಾಗೂ ವಿವಾದಗಳ ಚಂಡು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಜಾರಕಿಹೊಳಿ ಸಹೋದರರು ತಮ್ಮ ಸಮಸ್ಯೆಯನ್ನು ಖುದ್ದು ಹೈಕಮಾಂಡ್ ನೇತೃತ್ವದಲ್ಲೇ ಪರಿಹಾರ ಆಗಬೇಕೆನ್ನುವ ಪಟ್ಟು ಹಿಡಿದಿದ್ದರು. ಹೀಗಾಗಿ ಮಂಗಳವಾರ ಹಾಗು ಬುಧವಾರ ಎಐಸಿಸಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಿಮ್ಮಿಂದ ಸಾಧ್ಯವಾಗದೇ ಇದ್ರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ- ಸಿದ್ದು, ಜಾರಕಿಹೊಳಿ ಸಭೆಯ ಇನ್‍ಸೈಡ್ ಸ್ಟೋರಿ

ದೆಹಲಿಯಲ್ಲಿ ನಡೆಯುವ ಸಭೆಗೆ ಹಾಜರಾಗಲು ಮಂಗಳವಾರ ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ಪ್ರಮುಖ ಕೈ ನಾಯಕರು ತೆರಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜಾರಕಿಹೊಳಿ ಬ್ರದರ್ಸ್ ಗೆ ಮಾಜಿ ಸಿಎಂ ಕಿವಿಮಾತು
ಬುಧವಾರ ಬೆಳೆಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ತುರ್ತು ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಪರಿಷತ್‍ಗೆ ಅಭ್ಯರ್ಥಿಗಳ ಅಂತಿಮ ಪಡಿಸುವ ವಿಚಾರ ಹಾಗೂ ಪ್ರಮುಖವಾಗಿ ಜಾರಕಿಹೊಳಿ ಸಹೋದರರ ಅಸಮಾಧಾನವನ್ನು ಬಗೆಹರಿಸುವ ಚರ್ಚೆ ನಡೆಯಲಿದೆ. ಪಕ್ಷದಲ್ಲಿನ ಆಂತರಿಕ ಗೊಂದಲವನ್ನು ಖುದ್ದು ರಾಹುಲ್ ಗಾಂಧಿಯೊ0ದಿಗೆ ಹಂಚಿಕೊಳ್ಳಲು ಜಾರಕಿಹೊಳಿ ಸಹೋದರರು ತೀರ್ಮಾನಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply