ಏರ್ ಇಂಡಿಯಾದ 4,500 ಉದ್ಯೋಗಿಗಳು ಸ್ವಯಂ ನಿವೃತ್ತಿ – ಹೊಸ ವ್ಯವಸ್ಥೆಯೆಡೆಗೆ ಟಾಟಾ ಗ್ರೂಪ್

ಮುಂಬೈ: ಟಾಟಾ ಗ್ರೂಪ್ ಏರ್ ಇಂಡಿಯಾವನ್ನು ಮರಳಿ ಸ್ವಾಧೀನಪಡಿಸುತ್ತಿದ್ದಂತೆಯೇ ತನ್ನ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ(ವಿಆರ್‌ಎಸ್)ಯನ್ನು ಪರಿಚಯಿಸಿದೆ. ಹೊಸ ಪ್ರತಿಭೆಗಳನ್ನು ಕಂಪನಿಗೆ ಆಹ್ವಾನಿಸುವ ಸಲುವಾಗಿ ಟಾಟಾ ಗ್ರೂಪ್ ಈ ಯೋಜನೆಯನ್ನು ಮಾಡಿದ್ದು, ಇದರ ಅಡಿಯಲ್ಲಿ 4,500 ಉದ್ಯೋಗಿಗಳು ನಿವೃತ್ತಿಯನ್ನು ಆಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಕಂಪನಿ ಮೊದಲ ಬಾರಿಗೆ ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಕೆಲವು ಖಾಯಂ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಹೊರತಂದಿದೆ. ವಿಆರ್‌ಎಸ್ ಮಾರ್ಗಸೂಚಿ ಪ್ರಕಾರ 55 ವರ್ಷ ಮೇಲ್ಪಟ್ಟ ಅಥವಾ 20 ವರ್ಷಗಳಿಂದ ಸೇವೆ ಸಲ್ಲಿಸಿದವರಿಗೆ ಮಾತ್ರವೇ ಈ ಯೋಜನೆ ಅನ್ವಯವಾಗುತ್ತದೆ. ಇದನ್ನೂ ಓದಿ: 5ಜಿ ನೆಟ್‌ ಭಾರತದಲ್ಲಿ ಬೆಲೆ ಎಷ್ಟಿರಬಹುದು?

ಟಾಟಾ ಗ್ರೂಪ್ ಏರ್‌ಲೈನ್‌ನ ಕಾರ್ಯಾಚರಣೆಗೆ, ಸಂಸ್ಥೆಯ ಪರಿಷ್ಕರಣೆಗೆ, ಉತ್ಪಾದಕತೆಯನ್ನು ಸುಧಾರಿಸಲು ಹಾಗೂ ಹಳೆಯ ವ್ಯವಸ್ಥೆಗಳನ್ನು ತೆಗೆದು ಡಿಜಿಟಲೀಕರಣವಾಗಿ ಅಪ್‌ಡೇಟ್ ಮಾಡಲು ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಲ್‌ಗೇಟ್ಸ್ ಹಿಂದಿಕ್ಕಿ ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ

ಏರ್ ಇಂಡಿಯಾದಲ್ಲಿ 8,000 ಖಾಯಂ ಸಿಬ್ಬಂದಿ ಸೇರಿದಂತೆ ಒಟ್ಟು 12,000 ಉದ್ಯೋಗಿಗಳಿದ್ದಾರೆ. ಕಂಪನಿ ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ದೇಶದ ಪ್ರಮುಖ ನಗರಗಳಲ್ಲಿ ನೇಮಕಾತಿ ಪ್ರಕಿಯೆ ನಡೆಸುತ್ತಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *